ಮನರಂಜನೆ

‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍; ಹೈದರಾಬಾದ್‍ನಲ್ಲಿ ಚಿತ್ರೀಕರಣ

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್‍ ಆಗಲೀ, ನಿರ್ದೇಶಕ ಪ್ರೇಮ್‍ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್‍ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? ಅಥವಾ ಇದು ಗಾಳಿಸುದ್ದಿಯಾ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಸುದೀಪ್‍, ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದು, ಹೈದರಾಬಾದ್‍ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಆದರೆ, ಚಿತ್ರದಲ್ಲಿ ಸುದೀಪ್‍ ಅವರ ಪಾತ್ರವೇನು? ಎಷ್ಟು ಹೊತ್ತು ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರೆ ಮುಂತಾದ ಎಲ್ಲಾ ವಿಷಯಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ.

‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಧ್ರುವ ಸರ್ಜಾ ನಾಯಕನಾಗಿ ನಟಿಸುವುದರ ಜೊತೆಗೆ ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍ ಮುಂತಾದವರು ನಟಿಸಿದ್ದಾರೆ. ಈಗ ಈ ತಾರಾಗಣಕ್ಕೆ ಸುದೀಪ್‍ ಸಹ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಪ್ರೇಮ್‍ ನಿರ್ದೇಶನದ ‘ದಿ ವಿಲನ್‍’ ಚಿತ್ರದಲ್ಲಿ ಸುದೀಪ್‍ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ, ‘ಕೆಡಿ – ದಿ ವಿಲನ್‍’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.

‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಪ್ರೇಮ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್‍. ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್‍ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್‍ ಛಾಯಾಗ್ರಹಣ ಚಿತ್ರಕ್ಕಿದೆ.

ಈ ಚಿತ್ರದ ಚಿತರೀಕರಣ ಮುಗಿದಿದ್ದು, ಬರೀ ಸುದೀಪ್‍ ಅಭಿನಯದ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಅದೂ ಮುಕ್ತಾಯದ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಮೂಲಗಳ ಪ್ರಕಾರ, ನವೆಂಬರ್‍ ತಿಂಗಳಲ್ಲಿ ಚಿತ್ರದ ಬಿಡಗುಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

6 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

6 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

12 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

13 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

13 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

13 hours ago