Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸೆ.2ರ ಬದಲು ಸೆ.1ರ ರಾತ್ರಿಯೇ ಅಭಿಮಾನಿಗಳೊಂದಿಗೆ ಸುದೀಪ್‍ ಹುಟ್ಟುಹಬ್ಬ

sudeep

ಸುದೀಪ್‍ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು ಜಯನಗರದ MES Groundsನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಈ ಬಾರಿಯೂ ಮನೆಯ ಬದಲು ಬೇರೆ ಕಡೆ ಹುಟ್ಟುಹಬ್ಬವನ್ನು ಒಂದು ದಿನ ಮುಂಚಿತವಾಗಿ ಆಚರಿಸಿಕೊಳ್ಳುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಈ ಕುರಿತು ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ‘ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ, ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ. ನಿಮ್ಮ ಮೂಲಕವೇ ನನ್ನ ಹುಟ್ಟುಹಬ್ಬ ಹುಟ್ಟಬೇಕು. ಗಡಿಯಾರ 12 ಗಂಟೆ ಎಂದು ಸದ್ದು ಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ‘ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಸುದೀಪ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸೆಪ್ಟೆಂಬರ್‍.01ರ (ಸೋಮವಾರ) ರಾತ್ರಿ ಸುದೀಪ್‍ ಅಭಿಮಾನಿಗಳನ್ನು ಹೊಸಕೆರೆಹಳ್ಳಿಯ ಪಿ.ಇ.ಎಸ್‍ ಕಾಲೇಜ್‍ ಬಳಿ ಇರುವ ನಂದಿ ಲಿಂಕ್‍ ಗ್ರೌಂಡ್ಸ್ನಲ್ಲಿ ಆಚರಿಸಿಕೊಳ್ಳಲಿದ್ದಾರಂತೆ. ಈ ಕುರಿತು ಇನ್ನೊಂದೆರಡು ದಿನಗಳಲ್ಲಿ ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಇನ್ನೊಂದು ಪತ್ರ ಬರೆದು ಮಾಹಿತಿ ನೀಡಲಿದ್ದಾರಂತೆ.

Tags:
error: Content is protected !!