sudeep
ಸುದೀಪ್ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು ಜಯನಗರದ MES Groundsನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.
ಈ ಬಾರಿಯೂ ಮನೆಯ ಬದಲು ಬೇರೆ ಕಡೆ ಹುಟ್ಟುಹಬ್ಬವನ್ನು ಒಂದು ದಿನ ಮುಂಚಿತವಾಗಿ ಆಚರಿಸಿಕೊಳ್ಳುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಈ ಕುರಿತು ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ‘ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ, ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ. ನಿಮ್ಮ ಮೂಲಕವೇ ನನ್ನ ಹುಟ್ಟುಹಬ್ಬ ಹುಟ್ಟಬೇಕು. ಗಡಿಯಾರ 12 ಗಂಟೆ ಎಂದು ಸದ್ದು ಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ‘ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಸುದೀಪ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸೆಪ್ಟೆಂಬರ್.01ರ (ಸೋಮವಾರ) ರಾತ್ರಿ ಸುದೀಪ್ ಅಭಿಮಾನಿಗಳನ್ನು ಹೊಸಕೆರೆಹಳ್ಳಿಯ ಪಿ.ಇ.ಎಸ್ ಕಾಲೇಜ್ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ಸ್ನಲ್ಲಿ ಆಚರಿಸಿಕೊಳ್ಳಲಿದ್ದಾರಂತೆ. ಈ ಕುರಿತು ಇನ್ನೊಂದೆರಡು ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಇನ್ನೊಂದು ಪತ್ರ ಬರೆದು ಮಾಹಿತಿ ನೀಡಲಿದ್ದಾರಂತೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…