‘ಚೈತ್ರದ ಪ್ರೇಮಾಂಜಲಿ’ ಖ್ಯಾತಿಯ ಶ್ವೇತಾ, 20 ವರ್ಷಗಳ ವಿರಾಮದ ನಂತರ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್’ ಚಿತ್ರದಲ್ಲಿ ಶ್ವೇತಾ ನಟಿಸುತ್ತಿದ್ದಾರೆ ಎಂಬು ಸುದ್ದಿಯೊಂದು ಕೇಳಿಬಂದಿತ್ತು. ಈಗ ಈ ಚಿತ್ರಕ್ಕೆ ಮತ್ತೊಬ್ಬ ಹಿರಿಯ ನಟಿ ಸುಧಾರಾಣಿ ಎಂಟ್ರಿಯಾಗಿದೆ.
ಹೌದು, ‘ಚೌಕಿದಾರ್’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಸುಧಾರಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಟ್ರಾಫಿಕ್ ಇನ್‍ಸ್ಪೆಕ್ಟರ್ ಆಗಿ ನಟಿಸುತ್ತಿದ್ದಾರೆ. ಪೊಲೀಸ್ ಪಾತ್ರದಲ್ಲಿ ಸುಧಾರಾಣಿ ಅವರು ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ, ಜಗ್ಗೇಶ್ ನಿರ್ದೇಶನದ ’ಗುರು’ ಚಿತ್ರದಲ್ಲೂ ಪೊಲೀಸ್ ಇನ್‍ಸ್ಪೆಕ್ಟರ್ ಆಗಿ ನಟಿಸಿದ್ದರು. ಈಗ ಟ್ರಾಫಿಕ್ ಇನ್‍ಸ್ಪೆಕ್ಟರ್ ಆಗಿ ಬಂದಿದ್ದಾರೆ ಅಷ್ಟೇ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ, ‘ಇದೊಂದು ಕೌಟುಂಬಿಕ ಚಿತರ. ರೇಶ್ಮೆ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಇದು ಯಾವ ನೈಜ ಘಟನೆಯನ್ನು ಆಧರಿಸಿಲ್ಲದಿದ್ದರೂ, ನಾಯಕ, ನಾಯಕಿ ಮತ್ತು ನಾಯಕನ ಅಪ್ಪನ ಪಾತ್ರಗಳನ್ನು ನೋಡಿರೆ, ಇವರು ಎಲ್ಲಾ ಕುಟುಂಬಗಳಲ್ಲೂ ಕಾಣಿಸುತ್ತಾರೆ. ಇದೇ ಮೊದಲ ಬಾರಿಗೆ ಪೃಥ್ವಿ ಮಾಸ್ ಪಾತ್ರ ಮಾಡುತ್ತಿದ್ದಾರೆ. ಇವತ್ತಿನ ತಲೆಮಾರಿನವರ ಕಥೆ ಇದಾಗಿದ್ದು, ಅವರಿಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ’ ಎಂದಿದ್ದರು.
ಇದುವರೆಗೂ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಅಭಿನಯಿಸಿದ್ದ ಪೃಥ್ವಿ ಅಂಬಾರ್, ‘ಚೌಕಿದಾರ್’ ಚಿತ್ರದಲ್ಲಿ ಮಾಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಂಡಿದ್ದಾರಂತೆ. ಪೃಥ್ವಿಗೆ ನಾಯಕಿಯಾಗಿ ಧನ್ಯಾ ರಾಮ್‍ಕುಮಾರ್ ಅಭಿನಯಿಸುತ್ತಿದ್ದಾರೆ. ಇದು ಪೃಥ್ವಿ ಮತ್ತು ಧನ್ಯಾ, ನಾಯಕ-ನಾಯಕಿಯಾಗಿ ನಟಿಸುತ್ತಿರುವ ಮೊದಲ ಚಿತ್ರ. ಪೃಥ್ವಿ ತಂದೆಯಾಗಿ ಸಾಯಿಕುಮಾರ್ ನಟಿಸಿದರೆ, ತಾಯಿಯ ಪಾತ್ರದಲ್ಲಿ ಶ್ವೇತಾ ನಟಿಸುತ್ತಿರುವ ಸುದ್ದಿ ಇದೆ. ಇನ್ನು, ವಿಲನ್ ಪಾತ್ರದಲ್ಲಿ ಧರ್ಮ ನಟಿಸುತ್ತಿದ್ದಾರೆ.
‘ಚೌಕಿದಾರ್’ ಚಿತ್ರವನ್ನು ಕಲ್ಲಹಳ್ಳಿ ಚಂದ್ರಶೇಖರ್, VS ಎಂಟರ್ ಟೈನ್ಮೆಂಟ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…