ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಸೆನ್ಸಾರ್ ಪ್ರಮಾಣಪತ್ರವನ್ನು ಪಡೆಯಲು ನಿರ್ಮಾಪಕರು ವಿಫಲರಾದ ಕಾರಣ ವಿಜಯ್ ಅವರ ಚಿತ್ರವನ್ನು ಜನವರಿ.9ರಂದು ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ. ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್ ಅರ್ಜಿದಾರರಿಗೆ ಮದ್ರಾಸ್ ಹೈಕೋರ್ಟ್‌ಗೆ ಹಿಂತಿರುಗಲು ನಿರ್ದೇಶಿಸಿತು. ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಾದಗಳನ್ನು ಎತ್ತಬೇಕು ಎಂದು ಹೇಳಿತು. ಈ ಹಿಂದೆ ಸುಳ್ಳು ತುರ್ತು ಪ್ರಜ್ಞೆ ತೋರಿಸಿದ್ದಕ್ಕಾಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿತು ಹಾಗೂ ವಿಷಯ ಸಂಪೂರ್ಣವಾಗಿ ವಿಚಾರಣೆಯಾಗುವವರೆಗೆ ಪ್ರಮಾಣಪತ್ರವನ್ನು ತಡೆಹಿಡಿಯಲು ಸಿಬಿಎಫ್ಸಿಗೆ ಆದೇಶ ನೀಡಿತು.
ಜನವರಿ.20ರಂದು ಮೇಲ್ಮನವಿಯನ್ನು ನಿರ್ಧರಿಸಲು ಪ್ರಯತ್ನಿಸುವಂತೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಕೇಳಿದೆ. ತನ್ನ ನಿಲುವನ್ನು ಸ್ಪಷ್ಟಪಡಿಸಿದ ಪೀಠ, ಸುಪ್ರೀಂಕೋರ್ಟ್ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…