ಮನರಂಜನೆ

‘ಸೂರಿ ಅಣ್ಣ’ ಈಗ ‘ಸೂರಿ ಅಣ್ಣ’; ಚಿತ್ರದ ಟೀಸರ್ ಬಿಡುಗಡೆ

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಕೆ ಉಮೇಶ್, ಲಹರಿ ವೇಲು, ಭೂಗತಲೋಕದಲ್ಲಿ ಒಂದು ಕಾಲದಲ್ಲಿ ಹೆಸರು ಮಾಡಿದ್ದ ಎಚ್.ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ), ಪಿ.ಮೂರ್ತಿ,‌ ಗಡ್ಡ ನಾಗಣ್ಣ,‌ ಜೀಬ್ರಾ, ಲಕ್ಕಿ ಅಣ್ಣ, ಶ್ರೀರಾಮಪುರ ಮೊಟ್ಟೆ ಕಣ್ಣ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಾನು ಈ ಚಿತ್ರ ನಿರ್ಮಾಣ ಮಾಡಲು ಇಲ್ಲಿ ಬಂದಿರುವ ಸಾಕಷ್ಟು ಜನರು ಸ್ಪೂರ್ತಿ ಎಂದು ಮಾತು ಶುರು ಮಾಡಿದ ಸೂರಿ, ‘ಇದೊಂದು ರೌಡಿಸಂ ಚಿತ್ರ. ಯಾರೂ ರೌಡಿಸಂ ಮಾಡಬೇಡಿ, ಎಲ್ಲರಿಗೂ ಕುಟುಂಬ ಇರುತ್ತದೆ, ಎಲ್ಲದಕ್ಕಿಂತ ಅದು ಮುಖ್ಯ ಎಂಬ ಉತ್ತಮ ಸಂದೇಶವನ್ನು ಈ ಚಿತ್ರ ಯುವಜನತೆಗೆ ನೀಡುತ್ತದೆ. ನನ್ನ ಹೆಸರು ದಿನೇಶ್. ‘ಸಲಗ’ ಚಿತ್ರದ ನಂತರ ‘ಸೂರಿ‌ ಅಣ್ಣ’ ಎಂದೇ ಎಲ್ಲರೂ ಗುರುತಿಸುತ್ತಾರೆ‌. ನಾನೇ ಈ ಚಿತ್ರವನ್ನು ನಿರ್ದೇಶಿಸಿ-ನಿರ್ಮಾಣ ಮಾಡಿದ್ದೇನೆ. ನಾನೇ ನಾಯಕನಾಗಿ ನಟಿಸಿದ್ದೇನೆ’ ಎಂದು ಮಾಹಿತಿ ನೀಡಿದರು.

ಹೆರಿಗೆ ನೋವಿನ ಬಗ್ಗೆ ತಾಯಿ ಮಾತ್ರ ಹೇಳಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದ ‘ಕಾಕ್ರೋಚ್‍’ ಸುಧಿ. ಹಾಗೆ ರೌಡಿಸಂ ಮಾಡಿದವರು ಅನುಭವಿಸಿದ ನೋವುಗಳನ್ನು ಅವರೆ ಹೇಳಬೇಕು. ಹಾಗೆ ಹೇಳುವುದರ ಜೊತೆಗೆ ಯಾರು ಕೂಡ ಈ ಕೆಲಸ ಮಾಡಬೇಡಿ ಎಂದು ಸಂದೇಶ ನೀಡುವ ಪ್ರಯತ್ನವನ್ನು ಈ ಚಿತ್ರದಲ್ಲಿ ಸೂರಿ ಮತ್ತು ಚಿತ್ರತಂಡದವರು ಮಾಡಿದ್ದಾರೆ’ ಎಂದರು.

‘ಸೂರಿ ಅಣ್ಣ’ ಚಿತ್ರದಲ್ಲಿ ಸಂಭ್ರಮ ಶ್ರೀ, ಕಾಕ್ರೋಚ್ ‍ಸುಧಿ, ಯಶಸ್ವಿನಿ ಗೌಡ, ಕಾಮರಾಜ್, ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಪ್ರಸಾದ್ ಮುಂತಾದವರು ನಟಿಸಿದ್ದು, ಕೆ.ಎಂ‌‌.ಇಂದ್ರ ಸಂಗೀತವಿದೆ. ಎಂ.ಬಿ.ಅಳಿಕಟ್ಟಿ ಛಾಯಾಗ್ರಹಣ, ಎನ್.ಎಂ. ವಿಶ್ವ ಸಂಕಲನವಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಇನ್ನೆರಡು ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

18 mins ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

28 mins ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

42 mins ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

1 hour ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

5 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

5 hours ago