ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ಬಾಲಿವುಡ್‍ನ ಜನಪ್ರಿಯ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಬುಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಸುಮಾರು ಮೂರು ದಶಕಗಳ ಹಿಂದೆಯೇ ಅವರು ವೆಂಕಟೇಶ್ ಅಭಿನಯದ ‘ಕೂಲಿ ನಂಬರ್ ಒನ್’, ನಾಗಾರ್ಜುನ ಅಭಿನಯದ ‘ನಿನ್ನೇ ಪೆಳ್ಳಾಡತಾ’ ಮುಂತಾದ ಹಲವು ಚಿತ್ರಗಳನ್ನು ನಟಿಸಿದ್ದರು. 2020ರಲ್ಲಿ ಬಿಡುಗಡೆಯಾದ ‘ಅಲಾ ವೈಕುಂಠಪುರಂಲೋ’ ಚಿತ್ರದ ನಂತರ ಅವರು ಯಾವುದೇ ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಅವರು ಪುರಿ ಜಗನ್ನಾಥ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್, ಇಬ್ಬರೂ ತಬು ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.
ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ಯುಗಾದಿ ಹಬ್ಬಕ್ಕೆ ಈ ಜೋಡಿ ಮೊದಲ ಬಾರಿಗೆ ಕೈ ಜೋಡಿಸಿರುವ ಬಗ್ಗೆ ಮಾಹಿತಿ ನೀಡಿತ್ತು. ಇದೀಗ ಪುರಿ ಜಗನ್ನಾಥ್ ಹೊಸ ಪ್ರಾಜೆಕ್ಟ್ ಬಾಲಿವುಡ್ ಪ್ರತಿಭಾನ್ವಿತ ನಟಿ ಟಬು ಎಂಟ್ರಿ ಕೊಟ್ಟಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರದ ಚಿತ್ರೀಕರಣ ಜೂನ್ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ವಿಜಯ್ ಸೇತುಪತಿ ಹಿಂದೆಂದೂ ಕಾಣದ ಲುಕ್‌ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದಕ್ಕೂ ಮುನ್ನ ‘ಡಬಲ್ ಇಸ್ಮಾರ್ಟ್’ ಎಂಬ ಚಿತ್ರವನ್ನು ಪುರಿ ನಿರ್ದೇಶನ ಮಾಡಿದ್ದರು. ರಾಮ್ ಪೋತಿನೇನಿ, ಸಂಜಯ್ ದತ್ ಮುಂತಾದವರು ನಟಿಸಿದ್ದ ಈ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲೇ ಇಲ್ಲ. ಈಗ ವಿಜಯ್ ಸೇತುಪತಿ ಚಿತ್ರದೊಂದಿಗೆ ಪುರಿ ವಾಪಸ್ಸಾಗುತ್ತಿದ್ದಾರೆ.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…