ಮನರಂಜನೆ

ಮೈಸೂರು ಸ್ಯಾಂಡಲ್ ಸೋಪ್‍ಗೆ ತಮನ್ನಾ ರಾಯಭಾರಿ; ಸೋಷಿಯಲ್‍ ಮೀಡಿಯಾದಲ್ಲಿ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದು, ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ನೀಡಲಿದೆ. ಸಂಸ್ಥೆಯ ಜಾಹೀರಾತುಗಳಲ್ಲಿ ತಮನ್ನಾ ಭಾಗವಹಿಸಿ, ಪ್ರಚಾರ ಮಾಡಲಿದ್ದಾರೆ.

ಈ ನಡೆಯ ಕುರಿತು ಪ್ರಮುಖವಾಗಿ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಕರ್ನಾಟಕದ ಹೆಮ್ಮೆಯ ಸೋಪಿನ ಕುರಿತು ಪ್ರಚಾರ ಮಾಡುವುದಕ್ಕೆ ಕನ್ನಡ ನಟಿಯರು ಯಾರು ಸಿಗಲಿಲ್ಲವಾ? ಎಂದು ಹಲವರು ಪ್ರಶ್ನೆಯನ್ನು ಎತ್ತಿದ್ದಾರೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಸಂಸ್ಥೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ

ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸಹ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ಸ್ಯಾಂಡಲ್‌ನ ಪ್ರಾಥಮಿಕ ಗ್ರಾಹಕರು, ಕನ್ನಡಿಗರಾಗಿದ್ದಾರೆ ಎಂದಿರುವ ಅವರು, ‘ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಮಧ್ಯೆ, ತಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿರುವ ಸರ್ಕಾರದ ನಿರ್ಧಾರವನ್ನು ಕೆಲವರು ಬೆಂಬಲಿಸಿದ್ದಾರೆ. ‘ಕರ್ನಾಟಕದ ಹೊರಗೆ ಮೈಸೂರು ಸ್ಯಾಂಡಲ್‍ ಮಾರಾಟ ಮಾಡಲು ಜನಪ್ರಿಯ ಮುಖದ ಅವಶ್ಯಕತೆ ಇರುವುದರಿಂದ, ತಮನ್ನಾ ಅವರನ್ನು ಆಯ್ಕೆ ಮಾಡಿರುವುದು ಸರಿಯಾದ ಕ್ರಮ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

4 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

5 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

5 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

6 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

6 hours ago