‘ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ನಟಿ ತನಿಷಾ ಕಪ್ಪಂಡ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಒಪ್ಪಿಕೊಂಡಿದ್ದರೂ ಹೆಚ್ಚು ಸುದ್ದಿಯಾಗಿರಿಲಿಲ್ಲ. ಇದೀಗ ತನಿಷಾ, ‘ಪೆನ್‍ಡ್ರೈವ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ನಡೆಯಲಿದೆ.
‘ಪೆನ್‍ಡ್ರೈವ್’ ಚಿತ್ರವನ್ನು ಲಯನ್ ಆರ್ ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಇನ್ನು, ಸೆಬಾಸ್ಟಿಯನ್ ಡೇವಿಡ್ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯನ್ನೂ ಅವರೇ ಬರೆದಿದ್ದಾರಂತೆ.
‘ಪೆನ್‍ಡ್ರೈವ್’ ಎಂದರೆ ತಕ್ಷಣ ನೆನಪಿಗೆ ಬರುವುದು ಪ್ರಜ್ವಲ್ ರೇವಣ್ಣ ಪ್ರಕರಣ. ಈ ಚಿತ್ರಕ್ಕೂ, ಆ ಚಿತ್ರಕ್ಕೂ ಏನಾದರೂ ಸಂಬಂಧಿವಿದ್ದಿರಬಹುದಾ? ಎಂದನಿಸಬಹುದು. ಆದರೆ, ಆ ಪ್ರಕರಣಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಚಿತ್ರತಂಸಡದವರು ಹೆಳುವ ಪ್ರಕಾರ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಈ ಚಿತ್ರವನ್ನು ಮಾಡಬೇಕು ಎನ್ನುವ ಯೋಚನೆ ನಿರ್ದೇಶಕರಿಗೆ ಮೊದಲೇ ಇತ್ತಂತೆ. ಈಗ ಪೆನ್ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಈಗ ಚಿತ್ರಕ್ಕೆ ಕೈ ಹಾಕಿದ್ದಾರೆ ಡೇವಿಡ್.
ಈ ಚಿತ್ರದಲ್ಲಿ ತನಿಷಾ ಮಾತ್ರವಲ್ಲ, ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮುಂತಾದವತರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ‘ಬಿಗ್ ಬಾಸ್’ ಖ್ಯಾತಿಯ ವರ್ತೂರು ಸಂತೋಷ್ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಹ ಇರಲಿದ್ದಾರೆ.
ಸದ್ಯಕ್ಕೆ ಚಿತ್ರತಂಡ ಚಿತ್ರದ ಬಗ್ಗೆ ಯಾವುದೇ ವಿಷಯವನ್ನೂ ಬಹಿರಂಗಗೊಳಿಸಿಲ್ಲ. ಬಹುಶಃ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಾದರೂ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬಹುದೇನೋ?
ಅಂದಹಾಗೆ, ಕನ್ನಡದಲ್ಲಿ ಇದೊಂದೇ ‘ಪೆನ್‍ಡ್ರೈವ್’ ಅಲ್ಲ, ಈ ಹಿಂದೆ ’ಪಾತರಗಿತ್ತಿ’ ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದ ಕೆರ್ನಳ್ಳಿ ಈಶ್ವರ್ ಸಹ ‘ಪೆನ್‍ಡ್ರೈವ್’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್‍ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಕರಿಕೋಟು ಧರಿಸಿರುವ ಮುಖವಾಡ ಹಾಕಿಕೊಂಡು ಪೆನ್ ಡ್ರೈವ್ ಹಿಡಿದುಕೊಂಡಿರುವುದು ವಿಷಯ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…