ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

40 seconds ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

6 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago