ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’.
‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ ಕಿಂಗ್ ತಾಲೂಕ’. ಈ ಚಿತ್ರವು ನವೆಂಬರ್ 27ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಕನ್ನಡದ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ.
ಸಿನಿಮಾನಲ್ಲಿ ಉಪೇಂದ್ರ ಸ್ಟಾರ್ ಹೀರೋ ಆಗಿ ನಟಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕಥೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ಮುಂತಾದವರು ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ನಿರ್ಮಿಸಿದೆ.
ಈ ಚಿತ್ರದ ಕುರಿತು ಮಾತನಾಡಿದ ಉಪೇಂದ್ರ, ‘ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ಇರುತ್ತದೆ. ಕಥೆ, ಸಂದೇಶ, ಚಿತ್ರಕಥೆ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ, ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ. ಈ ಚಿತ್ರ ನೋಡಿ ಅಭಿಮಾನಿಗಳು ಎಂಜಾಯ್ ಮಾಡುತ್ತಾರೆ. ನಾನು ಚಿತ್ರ ನೋಡಿ ಮಾತನಾಡುತ್ತೇನೆ’ ಎನ್ನುತ್ತಾರೆ.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…