ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ ನಡೆದಿದೆ.
ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು, ವಿಜಯ್ ಅವರನ್ನು ಕೊಂಡಾಡಿದರು.
ಕೊನೆಯಲ್ಲಿ ವಿಜಯ್ ಸಹ ತುಸು ಭಾವುಕವಾಗಿಯೇ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಜನ ನಾಯಗನ್ ನನ್ನ ಕೊನೆಯ ಸಿನಿಮಾ, ಇದನ್ನು ಹೇಳುವುದೇ ನನಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಬೇರೆ ಆಯ್ಕೆ ಇಲ್ಲ. ‘ಅಭಿಮಾನಿಗಳು ಕೇಳುತ್ತಿದ್ದಾರೆ, ನೀವೇಕೆ ಸಿನಿಮಾ ಬಿಟ್ಟು ಹೋಗುತ್ತಿದ್ದೀರಿ ಎಂದು, ನಾನು ಬೀಚ್ ಬದಿ ಸಣ್ಣ ಮನೆ ಕಟ್ಟಿಕೊಳ್ಳೋಣ ಎಂದುಕೊಂಡೆ, ಆದರೆ ಅಭಿಮಾನಿಗಳು ದೊಡ್ಡ ಕೋಟೆಯನ್ನೇ ಕಟ್ಟಿಕೊಟ್ಟಿದ್ದೀರಿ. ನಾನು ನಟನೆಗೆ ಬಂದಾಗಿನಿಂದ ಈಗಿನ ವರೆಗೂ ಅಭಿಮಾನಿಗಳು ನನ್ನ ಜೊತೆಗೆ ಇದ್ದೀರಿ, ನನಗೆ ಬೆಂಬಲಿಸಿದ್ದೀರಿ, ನನಗೆ ಬೇಕಾದ ಎಲ್ಲವನ್ನೂ ನೀಡಿದ್ದೀರಿ, ಆದರೆ ಮುಂದಿನ ನನ್ನ ಜೀವನದ 30 ವರ್ಷಗಳನ್ನು ನಾನು ಅಭಿಮಾನಿಗಳಿಗಾಗಿ ಕಳೆಯಬೇಕು ಎಂದುಕೊಂಡಿದ್ದೀನಿ’ ಎಂದಿದ್ದಾರೆ ವಿಜಯ್.
ಇದನ್ನು ಓದಿ: ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ
ನನಗಾಗಿ ತಮ್ಮ ಎಲ್ಲವನ್ನೂ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ನನ್ನ ಪ್ರೀತಿಯ ಸಿನಿಮಾವನ್ನು ಬಿಟ್ಟುಕೊಡುತ್ತಿದ್ದೀನಿ. ಈ ವಿಜಯ್ ಕೇವಲ ಒಳ್ಳೆಯದು ಹೇಳಲು ಬಂದವನಲ್ಲ. ಒಳ್ಳೆಯತನವನ್ನು ಸ್ಥಾಪಿಸಲು ಬಂದವ. ಇದು ನನ್ನ ಕೊನೆಯ ಸಿನಿಮಾ ಆಗಿರಬಹುದು, ಆದರೆ ಇದರ ಅಂತ್ಯದ ಬಳಿಕ ಹೊಸ ಅಧ್ಯಾಯವೇ ಆರಂಭ ಆಗಲಿದೆ’ ಎಂದಿದ್ದಾರೆ ದಳಪತಿ ವಿಜಯ್.
ಶೀಘ್ರವೇ ಅಭಿಮಾನಿಗಳ ಮುಂದೆ ಸಿನಿಮಾ ಬರಲಿದೆ. ಈ ಬಾರಿ ಒಂಟಿಯಾಗಿ ಬರಲಿದ್ದೇವಾ? ಜಂಟಿಯಾಗಿ ಬರಲಿದ್ದೇವ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆ ಕುತೂಹಲ ಹಾಗೆಯೇ ಇರಲಿ ಎಂದಿರುವ ವಿಜಯ್, ಇಷ್ಟು ವರ್ಷ ಒಂಟಿಯಾಗಿಯೇ ಹೋರಾಡಿದ್ದೇವೆ’ ಎಂದೂ ಸಹ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ.
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…