nidradevi next door kannada film song controversy
ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್ ಗಾಯಕ ಸೋನು ನಿಗಮ್ ಆಡಿದ ಅವಹೇಳನಕಾರಿ ಮಾತನ್ನು ವಿರೋಧಿಸಿ, ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡವು ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ …’ ಎಂಬ ಸೋನು ನಿಗಮ್ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿತ್ತು. ಈಗ ‘ನಿದ್ರಾದೇವಿ Next Door’ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿದೆ.
‘ನಿದ್ರಾದೇವಿ Next Door’ ಚಿತ್ರಕ್ಕಾಗಿ ಸೋನು ನಿಗಮ್ ಹಾಡಿದ್ದ ‘ನೀ ನನ್ನ’ ಎಂಬ ಹಾಡನ್ನು ಇತ್ತೀಚೆಗೆ ನಟ ಗಣೇಶ್ ಬಿಡುಗಡೆ ಮಾಡಿದರು. ಹಾಡು ಬಿಡುಗಡೆಯಾದ ಸ್ವಲ್ಪ ಸಮಯದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೇರೆಯವರಿಂದ ಹಾಡಿಸಲು ಚಿತ್ರತಂಡ ತೀರ್ಮಾನಿಸಿದೆ. ಯೂಟ್ಯೂಬ್‍ನಲ್ಲಿರುವ ಹಾಡು ಸದ್ಯ ಸೋನು ಧ್ವನಿಯಲ್ಲಿದ್ದು, ಆದಷ್ಟು ಬೇಗ ಬೇರೆಯವರಿಂದ ಹಾಡಿಸಲು ಚಿತ್ರತಂಡ ಮುಂದಾಗಿದೆ.
ಈ ಕುರಿತು ಮಾತನಾಡಿರುವ ನಿರ್ಮಾಪಕ ಜಯರಾಮ ದೇವಸಮುದ್ರ, ’ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ನೀ ನನ್ನ …’ ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ನಮಗೆ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ’ ಎಂದು ತಿಳಿಸಿದ್ದಾರೆ.
ಹಾಡು ಬಿಡುಗಡೆ ಮಾಡಿದ ಗಣೇಶ್, ‘ಭಾಷೆಯಿಂದ ನಾವೇ ಹೊರತು. ನಮ್ಮಿಂದ ಭಾಷೆ ಅಲ್ಲ. ಹಾಗಾಗಿ, ಬಹಳ ಸೊಗಸಾಗಿ ಮೂಡಿ ಬಂದಿರುವ ಈ ಹಾಡನ್ನು ನಿರ್ಮಾಪಕರು, ಕನ್ನಡ ಗಾಯಕರಿಂದಲೇ ಪುನಃ ಹಾಡಿಸುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಗಣೇಶ್ ಸಹ ಹೇಳಿದರು.
‘ನಿದ್ರಾದೇವಿ next door’ ಸಿನಿಮಾದಲ್ಲಿ ಪ್ರವೀಣ್ ಶೆಟ್ಟಿಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಸುರಾಗ್ ಸಾಗರ್ ನಿರ್ದೇಶನ ಮಾಡಿದ್ದು, ಸುರಮ್ ಮೂವೀಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…