darshan devil movie song
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. ಆದರೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಬಂಧನವಾದ ಹಿನ್ನೆಲೆಯಲ್ಲಿ ಹಾಡು ಬಿಡುಗಡೆಯನ್ನು ಮುಂದೂಡಲಾಯ್ತು. ಈಗ ಹಾಡು ಕೊನೆಗೂ ಆಗಸ್ಟ್.24ರಂದು ಬಿಡುಗಡೆಯಾಗುತ್ತಿದೆ.
ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ದರ್ಶನ್ ತಮ್ಮ ಭಾಗದ ಕೆಲಸವನ್ನು ಸಂಪೂರ್ಣವಾಗಿ ಮುಗಿಸಿಕೊಟ್ಟಿದ್ದು, ಬಿಡುಗಡೆಯಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗಿದ್ದು, ಮೂಲಗಳ ಪ್ರಕಾರ, ಅ.23ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ.
‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…