ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.
818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್ ಸೇರುವ ಮುನ್ಸೂಚನೆ ನೀಡಿದೆ.
ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’
ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್.
‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…