ಮನರಂಜನೆ

ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.

818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್‍ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್‍ ಸೇರುವ ಮುನ್ಸೂಚನೆ ನೀಡಿದೆ.

ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’

ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್‍ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್‍ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್‍ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್‍.

‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್‍ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್‍ 1’ ಮೊದಲ ಸ್ಥಾನಕ್ಕೇರಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago