ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ,
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದಲ್ಲಿ ಮೂಡಿಬಂದಿರುವ 45 ಹಾಗೂ ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾಗಳ ಅಬ್ಬರ ಜೋರಾಗಿದೆ.
45 ಸಿನಿಮಾ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸಿರುವ ಚಿತ್ರವಾಗಿದ್ದು, ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇನ್ನು ಸುದೀಪ್ ಅವರ ವಿಭಿನ್ನ ಮ್ಯಾನರಿಸಂ ಹಾಗೂ ಕಥಾ ಆಯ್ಕೆಯಿಂದಲೇ ಮಾರ್ಕ್ ಸಿನಿಮಾ ಸದ್ದು ಮಾಡುತ್ತಿದೆ.
ಒಟ್ಟಿನಲ್ಲಿ ಈ ಎರಡು ಚಿತ್ರಗಳು ಕ್ರಿಸ್‌ಮಸ್ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಥಿಯೇಟರ್‌ಗಳು ಹೌಸ್‌ಫುಲ್ ಆಗಿವೆ.





