ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.
ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.
ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.
‘ಮಣಿಕಂಠ’ ಚಿತ್ರದಲ್ಲಿ ಜೀವನ್ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್‌ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…