ಮನರಂಜನೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ನ ಮುಹೂರ್ತ

ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.

ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್‌ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.

ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್‍ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.

‘ಮಣಿಕಂಠ’ ಚಿತ್ರದಲ್ಲಿ ಜೀವನ್‌ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್‌ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago