ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಈ ವರ್ಷವೇ ತೆರೆಕಾಣಲಿದ್ದು, ಡಿಸೆಂಬರ್.12ರಂದು ಬಿಡುಡಗೆಯಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಡೆವಿಲ್ ಸಿನಿಮಾ ಬಿಡುಗಡೆಗೆ ತೊಂದರೆ ಆಗಬಾರದು ಎಂದು ನಿರ್ಧಾರ ಮಾಡಿರುವ ನಟ ದರ್ಶನ್ ಅವರು, ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡುವಂತೆ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ದರ್ಶನ್ ಅನುಪಸ್ಥಿತಿಯಲ್ಲೇ ದಿ ಡೆವಿಲ್ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಇದೇ ಡಿಸೆಂಬರ್.12ರಂದು ದಿ ಡೆವಿಲ್ ಸಿನಿಮಾ ಅದ್ಧೂರಿಯಾಗಿ ತೆರೆಕಾಣಲಿದೆ.
ದರ್ಶನ್ ಸೋಷಿಯಲ್ ಮೀಡಿಯಾ ಖಾತೆಯನ್ನು ಪತ್ನಿ ವಿಜಯಲಕ್ಷ್ಮೀ ಅವರು ನಿರ್ವಹಿಸುತ್ತಿದ್ದು, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಡೆವಿಲ್ ಚಿತ್ರದ ಬಗ್ಗೆ ಅಪ್‌ಡೇಟ್ ನೀಡಿದ್ದು, ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಸೇರಿದಂತೆ ಮುಂತಾದವರು ದಿ ಡೆವಿಲ್ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನ ಮಾಡಿದ್ದು, ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.





