ಮನರಂಜನೆ

ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ದಿ ಡೆವಿಲ್‌ ಸಿನಿಮಾ ಈ ವರ್ಷವೇ ತೆರೆಕಾಣಲಿದ್ದು, ಡಿಸೆಂಬರ್.‌12ರಂದು ಬಿಡುಡಗೆಯಾಗಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಡೆವಿಲ್‌ ಸಿನಿಮಾ ಬಿಡುಗಡೆಗೆ ತೊಂದರೆ ಆಗಬಾರದು ಎಂದು ನಿರ್ಧಾರ ಮಾಡಿರುವ ನಟ ದರ್ಶನ್‌ ಅವರು, ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡುವಂತೆ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ದರ್ಶನ್‌ ಅನುಪಸ್ಥಿತಿಯಲ್ಲೇ ದಿ ಡೆವಿಲ್‌ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಇದೇ ಡಿಸೆಂಬರ್.12ರಂದು ದಿ ಡೆವಿಲ್‌ ಸಿನಿಮಾ ಅದ್ಧೂರಿಯಾಗಿ ತೆರೆಕಾಣಲಿದೆ.

ದರ್ಶನ್‌ ಸೋಷಿಯಲ್‌ ಮೀಡಿಯಾ ಖಾತೆಯನ್ನು ಪತ್ನಿ ವಿಜಯಲಕ್ಷ್ಮೀ ಅವರು ನಿರ್ವಹಿಸುತ್ತಿದ್ದು, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಡೆವಿಲ್‌ ಚಿತ್ರದ ಬಗ್ಗೆ ಅಪ್‌ಡೇಟ್‌ ನೀಡಿದ್ದು, ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ದರ್ಶನ್‌, ರಚನಾ ರೈ, ಶರ್ಮಿಳಾ ಮಾಂಡ್ರೆ ಸೇರಿದಂತೆ ಮುಂತಾದವರು ದಿ ಡೆವಿಲ್‌ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನ ಮಾಡಿದ್ದು, ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

3 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago