ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್ ಮೋಹಿತ್ ಅಲಿಯಾಸ್ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು.
ಇದೀಗ ಅದೇ ಪರಿಕಲ್ಪನೆಯೊಂದಿಗೆ ಜೆ.ಆರ್.ಎಂ, ‘ಅಮೃತ -ಅಂಜನ್’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಬಿಡುಗಡೆ ದಿನಾಂಕ ಘೋಷಣೆಗೆಂದೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಕಿರುಚಿತ್ರಗಳಲ್ಲಿ ಹೆಸರು ಮಾಡಿರುವ ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವಾರಿ, ಪಾಯಲ್ ಚಂಗಪ್ಪ, ಪಲ್ಲವಿ ಪರ್ವ, ಚೇತನ್ ದುರ್ಗ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ:‘ಮಹಾರಾಜ ಆಗೆಂದು…’ ವಿನಯ್‍ಗೆ ಹರಸಿದ ಅರುಣಾ ಬಾಲರಾಜ್
‘ಅಮೃತ -ಅಂಜನ್’ ಚಿತ್ರದ ಕುರಿತು ಮಾತನಾಡುವ ಜೆ.ಆರ್.ಎಂ, ‘ನಮ್ಮ ಮೋಹಿತೆ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾಗಿದ್ದ ಕಿರುಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಹಾಗಾಗಿ, ಅದೇ ಎಳೆ ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್ ಚಿತ್ರ ಮಾಡಿದ್ದೇವೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ಸೋಡಾಬುಡ್ಡಿ’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದಿತ್ತು. ಇದು ಎರಡನೇ ಚಿತ್ರ. ಇದೊಂದು ಮನರಂಜನಾತ್ಮಕ ಚಿತ್ರ. ತಂದೆ-ಮಗನ ಎಮೋಷನ್ಸ್ ಚಿತ್ರದಲ್ಲಿದ್ದು, ಸುಧಾಕರ್ ಹಾಗೂ ನವೀನ್ ಪಡೀಲ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಕಾಮಿಡಿ ಇದೆ. ನಮ್ಮ ಚಿತ್ರಕ್ಕೆ ಸುಧಾಮೂರ್ತಿ ಹಾಗೂ ಜಾಕಿ ಚಾನ್ ಸ್ಪೂರ್ತಿ. ಚಿತ್ರಕ್ಕೆ ಮಂಗಳೂರು, ಬೆಂಗಳೂರು, ತೀರ್ಥಳ್ಳಿ ಸುತ್ತಮುತ್ತ 68 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಈ ಚಿತ್ರಕ್ಕೆ ‘ಅಮೃತಾಂಜನ್’ ಎಂಬ ಟೈಟಲ್ ಸಿಗಲಿಲ್ಲ. ಹಾಗಾಗಿ ‘ಅಮೃತ -ಅಂಜನ್’ ಎಂದಿಟ್ಟಿದ್ದೇವೆ ಎಂದರು.
‘ಅಮೃತ -ಅಂಜನ್’ ಚಿತ್ರಕ್ಕೆ ಸುಮಂತ್ ಆಚಾರ್ಯ ಛಾಯಾಗ್ರಹಣ ಮತ್ತು ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…