ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ.
ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ದರ್ಶನ್ ಹಾಗೂ ರಚನ ರೈ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಇದನ್ನು ಓದಿ : ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ. ದರ್ಶನ್‍ಗೆ ನಾಯಕಿಯಾಗಿ ರಚನ ರೈ ಅಭಿನಯಿಸಿದ್ದು, ಮಿಕ್ಕಂತೆ ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಅಭಿನಯಿಸಿದ್ದಾರೆ.
‘ದಿ ಡೆವಿಲ್’ ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ





