‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್ ಶಮಂತ್ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ.
ಹೌದು, ‘ಬಿಗ್ ಬಾಸ್ – ಸೀಸನ್ 8’ರ ಖ್ಯಾತಿಯ ಶಮಂತ್ ಅಲಿಯಾಸ್ ಬ್ರೋ ಗೌಡ, ಇದೀಗ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಶಮಂತ್ ಅಭಿನಯದ ಹೊಸ ಚಿತ್ರದ ಅಧಿಕೃತ ಘೋಷಣೆ ಇತ್ತೀಚೆಗೆ ಆಗಿದ್ದು, ಈ ಚಿತ್ರದಲ್ಲಿ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಹೆಸರೇನು? ಈ ವಿಷಯದ ಬಗ್ಗೆ ಚಿತ್ರತಂಡ ಬಾಯಿಬಿಟ್ಟಿಲ್ಲ. ಆದರೆ, ಇದು ಕನ್ನಡದ ಮೊದಲ Zombie (ಪ್ರೇತ) ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರಕ್ಕೆ ಆನಂದ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಅನಿರುದ್ಧ್ ಅಭಿನಯದ ‘ಚೆಫ್ ಚಿದಂಬರ’ ಮತ್ತು ವಿಜಯ್ ರಾಘವೇಂದ್ರ ಅಭಿನಯದ ‘ರಾಘು’ ಚಿತ್ರಗಳನ್ನು ಆನಂದ್ ರಾಜ್ ನಿರ್ದೇಶನ ಮಾಡಿದ್ದರು. ಎರಡೂ ಕ್ರೈಂ ಥ್ರಿಲ್ಲರ್ ಚಿತ್ರಗಳಾಗಿದ್ದವು. ಈ ಬಾರಿ ಬೇರೆ ತರಹದ ಪ್ರಯತ್ನವೊಂನ್ನು ಮಾಡುತ್ತಿದ್ದಾರೆ ಆನಂದ್ ರಾಜ್.
ಈ ಚಿತ್ರದಲ್ಲಿ ಬ್ರೋ ಗೌಡ ನಾಯಕನಾಗಿ ನಟಿಸುತ್ತಿರುದರ ಜೊತೆಗೆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅವರು ಬ್ರೋ ಮೀಡಿಯಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ. ಸನ್‍ರೈಸ್ ಸಿನಿಮಾಸ್ ಎಂಬ ಸಂಸ್ಥೆ ಸಹ ಚಿತ್ರ ನಿರ್ಮಾಣದಲ್ಲಿ ಕೈಜೋಡಿಸಿದೆ.
ಏಪ್ರಿಲ್ ತಿಂಗಳನಿಂದ ಪ್ರಾರಂಭವಾಗಲಿರುವ ಈ ಚಿತ್ರಕ್ಕೆ ಉದಯ್ ಲೀಲಾ ಅವರ ಛಾಯಾಗ್ರಹಣ ಮತ್ತು ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದ್ದು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ.
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…