ಮನರಂಜನೆ

‘ಲಕ್ಷ್ಮೀಪುತ್ರ’ನಾದ ಚಿಕ್ಕಣ್ಣ; ಎ.ಪಿ. ಅರ್ಜುನ್‍ ನಿರ್ಮಾಣದ ಚಿತ್ರಕ್ಕೆ ನಾಯಕ

ಕಳೆದ ವರ್ಷ ಬಿಡುಗಡೆಯಾದ ‘ಉಪಾಧ್ಯಕ್ಷ’ ಚಿತ್ರದಲ್ಲಿ ನಾಯಕರಾಗಿದ್ದರು ಚಿಕ್ಕಣ್ಣ. ನಂತರ ಅವರು ಯಾವೊಂದು ಚಿತ್ರದಲ್ಲೂ ನಾಯಕನಾಗಿರಲಿಲ್ಲ. ಒಂದೇ ಚಿತ್ರಕ್ಕೆ ಅವರ ನಾಯಕತ್ವ ಸೀಮಿತವಾಯ್ತಾ? ಎಂಬ ಪ್ರಶ್ನೆ ಬರುವ ಹೊತ್ತಿನಲ್ಲೇ ಅವರು, ಇದೀಗ ಇನ್ನೊಂದು ಚಿತ್ರಕ್ಕೆ ಹೀರೋ ಆಗಿದ್ದಾರೆ. ಹೆಸರು ‘ಲಕ್ಷ್ಮೀ ಪುತ್ರ’.

ಕನ್ನಡ ಚಿತ್ರರಂಗದ ಬಿಡುಗಡೆಯಾಗಿ, ಸೋಲನುಭವಿಸಿದ್ದ ‘ಮಾರ್ಟಿನ್‍’ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್‍, ‘ಲಕ್ಷ್ಮೀ ಪುತ್ರ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಅವರು ‘ಕಿಸ್‍’ ಚಿತ್ರವನ್ನು ತಮ್ಮ ಸಂಸ್ಥೆಯ ಮೂಲಕ ನಿರ್ಮಿಸಿದ್ದರು. ಅದರ ನಂತರ ವಿರಾಟ್‍ ಅಭಿನಯದಲ್ಲಿ ‘ಅದ್ಧೂರಿ ಲವ್ವರ್‍’ ಎಂಬ ಚಿತ್ರವನ್ನು ಘೋಷಿಸಿದ್ದರು. ಈ ಚಿತ್ರ ಬಿಡುಗಡೆಗೆ ಮುನ್ನವೇ, ‘ಲಕ್ಷ್ಮೀ ಪುತ್ರ’ ಚಿತ್ರದ ನಿರ್ಮಾಣಕ್ಕೆ ಕೈಹಾಕಿದ್ದಾರೆ ಅರ್ಜುನ್.

‘ಲಕ್ಷ್ಮೀಪುತ್ರ’ ಚಿತ್ರಕ್ಕೆ ಅರ್ಜುನ್‍ ಕಥೆ ಹಾಗೂ ಸಾಹಿತ್ಯ ಬರೆದಿದ್ದಾರೆ. ಅರ್ಜುನ್ ಚಿತ್ರಕ್ಕೆ ಕೆಲಸ ಮಾಡಿದ್ದ ವಿಜಯ್ ಎಸ್. ಸ್ವಾಮಿ, ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ವಿಜಯ್‍ಗೆ ನಿರ್ದೇಶಕರಾಗಿ ಇದು ಮೊದಲ ಪ್ರಯತ್ನ.

ಈ ಚಿತ್ರವನ್ನು ಅರ್ಜುನ್ ಅವರ ಪತ್ನಿ ಅನ್ನಪೂರ್ಣ, ಎ.ಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್, ‘ಲಕ್ಷ್ಮೀಪುತ್ರ’ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ‘ಲಕ್ಷ್ಮೀಪುತ್ರ’ ಚಿತ್ರಕ್ಕಿದೆ.

ಇದೇ ತಿಂಗಳ 24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.

ಭೂಮಿಕಾ

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago