Darshan fans troll: Film Industry for Rights and Equality supports actress Ramya
ಬೆಂಗಳೂರು : ನಟ ದರ್ಶನ್ ಅವರು ಲೈಟ್ಬಾಯ್ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ ಅವರು, ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಹೇಳಿದರು.
ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ.
ಸಿನಿಮಾ ಗೆಲ್ಲಲೂ ಸ್ಟಾರ್ ನಟರೇ ಬೇಕಿಲ್ಲಿ
ದುಬಾರಿ ಬಜೆಟ್, ಸ್ಟಾರ್ ನಟರು ಇಲ್ಲದೇ ಸಿನಿಮಾ ಗೆಲ್ಲಿಸಬಹುದು ಎನ್ನುವುದಕ್ಕೆ ಸು ಫ್ರಂ ಸೋ ಸಿನಿಮಾ ಸಾಕ್ಷಿ ಎಂದಿದ್ದಾರೆ ನಟಿ ರಮ್ಯಾ. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂದು ಕೇಳಲಾದ ಪ್ರಶ್ನೆಗೆ ರಮ್ಯಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಅಂದಿದ್ದಾರೆ ರಮ್ಯಾ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…