ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.
ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರದ ಹೆಸರು ‘ಈ ಪಾದ ಪುಣ್ಯಪಾದ’. ಹೆಸರು ಕೇಳುತ್ತಿದ್ದಂತೆಯೇ ‘ಶ್ರೀ ಮಂಜುನಾಥ’ ಚಿತ್ರದ ಹಾಡು ನೆನಪಾಗುತ್ತದೆ. ಹಾಡಿನ ಮೊದಲ ಸಾಲುಗಳನ್ನೇ ಈ ಚಿತ್ರದ ಶೀರ್ಷಿಕೆಯನ್ನಾಗಿ ಮಾಡಿರುವ ಸಿದ್ದು, ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ, ಚಿತ್ರಕಥೆ ಮಾಡಿದ್ದೇನೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.
ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ ಆಟೋ ನಾಗರಾಜ್. ಕಳೆದ 18 ವರ್ಷಗಳಿಂದ ಆಟೋಗಳ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾ ಬಂದಿರುವ ಅವರು, ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಜೊತೆಗೆ ಚಿತ್ರದಲ್ಲಿ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್ ಮುಂತಾದವರು ನಟಿಸಿದ್ದಾರೆ.
ಅನಂತ್ ಆರ್ಯನ್ ಸಂಗೀತ ಮತ್ತು ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಪಡೆದಿದ್ದು, ಹಲವು ಚಿತ್ರೋತ್ಸವಗಳಲ್ಲಿ ಸ್ಪರ್ಧಿಸುತ್ತಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…