ಮನರಂಜನೆ

ಸೀಟ್‌ ಎಡ್ಜ್‌ನಲ್ಲಿ ಕೂತು ನೋಡುವಂತಹ ಸಿನಿಮಾ ಅಂತೆ ಇದು …

‘ವಿಕ್ರಾಂತ್‍ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಇದೇ ಮೊದಲ ಬಾರಿಗೆ ‘ಸೀಟ್‌ ಎಡ್ಜ್‌’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಹಾರರ್‍ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ವ್ಲಾಗರ್‍ ಆಗಿ ಅಭಿನಯಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಟೀಸರ್‍ ಬಿಡುಗಡೆ ಆಗಿದೆ.

ಸಿದ್ದು ಮೂಲಿಮನಿಗೆ ನಾಯಕಿಯಾಗಿ ರವೀಕ್ಷಾ ಶೆಟ್ಟಿ ಅಭಿನಯಿಸಿದ್ದು, ಮಿಕ್ಕಂತೆ ಗಿರೀಶ್‍ ಶಿವಣ್ಣ, ರಾಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚೇತನ್‍ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎನ್‌.ಆರ್‌.ಸಿನಿಮಾ ಪ್ರೊಡಕ್ಷನ್ಸ್‌ ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇದನ್ನು ಓದಿ:ಶಿವರಾಜಕುಮಾರ್ ಅಭಿನಯದ ‘ಬೇಲ್‍’ ಪ್ರಾರಂಭ: KVN ಪ್ರೊಡಕ್ಷನ್ಸ್ ನಿರ್ಮಾಣ

ಚೇತನ್‍ ಶೆಟ್ಟಿ ಈ ಹಿಂದೆ ‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಹಾಗೂ ‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರಂತೆ. ‘ಸೀಟ್‍ ಎಡ್ಜ್’ ಅವರ ನಿರ್ದೇಶನದ ಮೊದಲ ಚಿತ್ರ. ಈ ಕುರಿತು ಮಾತನಾಡುವ ಅವರು, ‘ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್‌ ಮತ್ತು ಸೋಶಿಯಲ್‌ ಮೀಡಿಯಾಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆಯಲು ಮತ್ತು ಜನಪ್ರಿಯರಾಗಲು ಯೂಟ್ಯೂಬರ್ಸ್‌ ಮತ್ತು ವ್ಲಾಗರ್ಸ್‌ ಏನೇನು ಸಾಹಸಗಳನ್ನು ಮಾಡುತ್ತಾರೆ ಎಂಬ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇದು ಎಲ್ಲಾ ತರಹದ ಪ್ರೇಕ್ಷಕರಿಗೂ ಕನೆಕ್ಟ್‌ ಆಗುವಂಥ ಸಿನಿಮಾ. ನಮಗೆ ಗೊತ್ತಿಲ್ಲದ ವಿಷಯದಲ್ಲಿ ದುಸ್ಸಾಹಸಕ್ಕೆ ಕೈಹಾಕಿದರೆ, ಏನೇನು ಆಗಬಹುದು ಎಂಬುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ’ ಎಂದರು.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ ಸಿನಿಮಾ ಎನ್ನುವ ಸಿದ್ಧು ಮೂಲಿಮನಿ, ‘ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾನೂಬ್ಬ ಯೂಟ್ಯೂಬ್‌ ವ್ಲಾಗರ್‌ ಆಗಿ ಕಾಣಿಸಿಕೊಂಡಿದ್ದೇನೆ. ಯಾರೂ ಹೋಗದ ಭಯಾನಕ್ಕೆ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು, ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತೇನೆ. ಆ ನಂತರ ಏನೆಲ್ಲಾ ಆಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಸೀಟ್‍ ಎಡ್ಜ್’ ಚಿತ್ರಕ್ಕೆ ಆಕಾಶ್‌ ಪರ್ವ ಸಂಗೀತ, ದೀಪಕ್ ಕುಮಾರ್ ಜೆ.ಕೆ ಛಾಯಾಗ್ರಹಣವಿದ್ದು, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

26 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

53 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago