ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಹೊರತುಪಡಿಸಿ, ಮಿಕ್ಕಂತೆ ಅವರು ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಸಚಿವ ಸಂತೋಷ್ ಲಾಡ್, ಜಿಲ್ಲಾಧಿಕಾರಿಯಾಗಿ ನಟಿಸುತ್ತಿದ್ದಾರೆ. ಅವರ ಭಾಗದ ಚಿತ್ರೀಕರಣ ಮತ್ತು ‘ಕನ್ನಡಿಗ’ ಎಂಬ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿ ಇದೆ.
ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ವಿ. ನಾಗೇಂದ್ರ ಪ್ರಸಾದ್ ಒಡೆತನದ ಮ್ಯೂಸಿಕ್ ಬಜಾರ್‍ನಲ್ಲಿ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಈ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶಾಲಾ ಮಕ್ಕಳ ಸಮ್ಮುಖದಲ್ಲೇ ನಡೆದಿದ್ದು ವಿಶೇಷ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.
ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತ ಸಂಯೋಜಿಸಿ, ನಿರ್ದೇಶನದ ಜವಾಬ್ದಾರಿಯನ್ನೂ ಪ್ರಸನ್ನ ಹೊತ್ತಿದ್ದಾರೆ. ಚಿತ್ರದ ಕುರಿತು ಮಾತನಾಡುವ ಅವರು, ‘ಭಾರತಿ ಎನ್ನುವ ಏಳನೇ ತರಗತಿ ವಿದ್ಯಾರ್ಥಿಯೊಬ್ಬಳು ತನ್ನ ಊರಿನವರೆಲ್ಲರನ್ನು ಸಾಕ್ಷರನ್ನಾಗಿ ಮಾಡಬೇಕೆಂದು ಕನಸು ಕಾಣುತ್ತಾಳೆ. ಈ ಹಾದಿಯಲ್ಲಿ ಆಕೆ ಎದುರಿಸುವ ನೋವು, ಅವಮಾನ ಮತ್ತು ಇದೆಲ್ಲವನ್ನೂ ಮೀರಿ ಆಕೆ ಹೇಗೆ ಗೆದ್ದು ನಿಲ್ಲುತ್ತಾಳೆ ಎಂಬುದು ಚಿತ್ರದ ಕಥೆ. ಇಲ್ಲಿಯವರೆಗೂ 34 ದಿನಗಳ ಚಿತ್ರೀಕರಣ ನಡೆಸಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಜಿಲ್ಲಾದಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಒಟ್ಟು 10 ಗೀತೆಗಳು ಇರಲಿದ್ದು, ಎಲ್ಲವನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ’ ಎಂದರು.
ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಶಿಕ್ಷಕರಾಗಿ ಸಿಹಿಕಹಿ ಚಂದ್ರು, ಟೈಟಲ್ ರೋಲ್‌ದಲ್ಲಿ ಕು.ಯಶಿಕಾ, ಗೋವಿಂದೇಗೌಡ, ಅಶ್ವಿನ್ ಹಾಸನ್, ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ದಿವ್ಯಾ ಅಂಚನ್, ಬೆನಕಾ ನಂಜಪ್ಪ, ರೋಹಿತ್ ರಾಘವೇಂದ್ರ, ಸೌಜನ್ಯ ಸುನಿಲ್, ಎಂ.ಜೆ. ರಂಗಸ್ವಾಮಿ ಮುಂತಾದವರು ನಟಿಸಿದ್ದಾರೆ. ಎಂ.ಬಿ.ಹಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…