ಬೆಂಗಳೂರು: ಇಂದು ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪಂಚಭಾಷಾ ನಟ ಪ್ರಕಾಶ್ ರಾಜ್ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಬಳಿಕ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಮಾಡಿರುವ ನಟ, ಬಿಜೆಪಿ ಹೆಸರೇಳದೇ ಎನ್‌ಡಿಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ತಾವು ಮತದಾನ ಮಾಡಿರುವುದನ್ನು ಉಲ್ಲೇಖಿಸಿ ಮಾತನಾಡಿ, ಕಳೆದೊಂದು ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣವನ್ನು ಕಂಡಿದ್ದೇವೆ. ಇದನ್ನು ಕೊನೆಗಾಣಿಸಲು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ನನ್ನನ್ನು ಪ್ರತಿನಿಧಿಸುವವರಿಗೆ ನನ್ನ ಮತ, ಉತ್ತಮ ಅಭ್ಯರ್ಥಿ, ಉತ್ತಮ ಪ್ರಣಾಳಿಕೆಗೆ ನನ್ನ ಮತ ಹಾಕಿದ್ದೇಣೆ ಎಂದು ಹೇಳಿದ್ದಾರೆ.
ಒಂದು ಬದಲಾವಣೆಗಾಗಿ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ ನೀಡಿದ್ದೇನೆ. ನಮ್ಮಿಂದ ಚುನಾಯಿತರಾಗುವವರು ಸಂಸತ್‌ನಲ್ಲಿ ನಮ್ಮ ಧ್ವನಿಯಾಗಬೇಕು. ಹಾಗಾಗಿ ಎಲ್ಲರೂ ಉತ್ತಮ ಅಭ್ಯರ್ಥಿಗೆ ಮತ ಹಾಕಿ ಎಂದು ಪ್ರಕಾಶ್ ವೀಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…