ಮನರಂಜನೆ

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಥಗ್‌ ಲೈಫ್’.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

‘ಥಗ್‌ ಲೈಫ್‌’ ಚಿತ್ರದ ‘ಜಿಂಗುಚ್ಚಾ …’ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬರೆದಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‍ನ್ಯಾಷನಲ್‍, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಕಮಲ್ ಹಾಸನ್, ಸಿಲಂಬರಸನ್‍, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ, ನಾಸರ್‍ ಮುಂತಾದವರು ನಟಿಸಿರುವ ಈ ಚಿತ್ರದ ಕಥೆ-ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

49 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

1 hour ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

1 hour ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

4 hours ago