ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.
ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ಅಭಿಮಾನಿಗಳು ತೋರಿಸೋ ಪ್ರೀತಿ ವ್ಯಕ್ತಿತ್ವದಿಂದ ನಾನು ಇಲ್ಲಿಯವರೆಗೆ ಬಂದಿದ್ದೇನೆ. ಹೋದಲೆಲ್ಲಾ ತಲೆ ಎತ್ತಿಕೊಂಡು ನಿಲ್ತೀವಿ ಅಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅವರಿಗೆ ಕಳಂಕ ತರುವ ಕೆಲಸವನ್ನೂ ಯಾವತ್ತೂ ಮಾಡಲ್ಲ ಎಂದರು.
ಅಭಿಮಾನಿಗಳನ್ನು ಮನೆ ಬಳಿ ಭೇಟಿ ಮಾಡಲು ಆಗಲಿಲ್ಲ. ನನ್ನ ತಂದೆ ತಾಯಿಗೆ ವಯಸ್ಸಾಗಿದೆ. ಕಳೆದ ಬಾರಿ ಅಕ್ಕ-ಪಕ್ಕದ ಮನೆಯವರಿಗೂ ತೊಂದರೆ ಆಗಿದೆ. ಹಾಗಾಗಿ ಇಲ್ಲಿಗೆ ಬಂದು ನಿಮ್ಮೆಲ್ಲರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದರು.
ಪ್ರೀತಿ ಹಾಗೂ ಒಳ್ಳೆಯತನ ತೋರಿಸೋದಕ್ಕೆ ಕಾಂಪ್ರೋ ಆಗಬೇಡಿ ಎಂದು ಅಭಿಮಾನಿಗಳಿಗೆ ಇದೇ ವೇಳೆ ಕಿವಿಮಾತು ಹೇಳಿದರು.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…