ಬೆಂಗಳೂರು: ನಗರದ ಜಿ.ಆರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾ ಅವರ ಬಂಧನವಾಗಿತ್ತು.
ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಬುಧವಾರ (ಜೂನ್.12) ಜಾಮೀನು ಮಂಜೂರು ಮಾಡಿದೆ. ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ಪ್ರಕರಣದಡಿಯಲ್ಲಿ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಆನೆಕಲ್ ವಿಶೇಷ ನ್ಯಾಯಾಲಯ ಅವರಿಗೆ ಜೂನ್.14 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಈ ಸಂಬಂಧ ಹೇಮಾ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…