ಮನರಂಜನೆ

ಏಪ್ರಿಲ್‍ಗೆ ಬಿಡುಗಡೆ ಆಗುವುದಿಲ್ಲ ಯಶ್‍ ನಟನೆಯ ‘ಟಾಕ್ಸಿಕ್’

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಎರಡು ತಿಂಗಳುಗಳಿಂದ ಭರದಿಂದ ಸಾಗಿದೆ. ಹೀಗಿರುವಾಗಲೇ, ಚಿತ್ರವು ಅಂದುಕೊಂಡಂತೆ ಮುಂದಿನ ವರ್ಷ ಏಪ್ರಿಲ್‍ 10ರಂದು ಬಿಡುಗಡೆ ಆಗುವುದಿಲ್ಲ ಎಂದು ಸ್ವತಃ ನಟ ಯಶ್‍ ಸ್ಪಷ್ಟಪಡಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ‘ಟಾಕ್ಸಿಕ್‍’ ಚಿತ್ರವು ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‍, ಚಿತ್ರವು ಏಪ್ರಿಲ್‍ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು, ಚಿತ್ರಕ್ಕೆ ‘ಟಾಕ್ಸಿಕ್‍ – A Fairy Tale For Grown-Ups’ ಎಂಬ ಶೀರ್ಷಿಕೆ ಕೊಟ್ಟಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ. ‘ನಮ್ಮಲ್ಲಿ ಮಕ್ಕಳಿಗೆ ಸಾಕಷ್ಟು ಕಾಲ್ಪನಿಕ ಕಥೆಗಳಿವೆ. ಆದರೆ, ದೊಡ್ಡವರಿಗೆ ಅಂತಹ ಕಥೆಗಳಿಲ್ಲ. ಯಾಕೆ, ದೊಡ್ಡವರಿಗೆ ಅಂಥದ್ದೊಂದು ಕಥೆ ಕೊಡಬಾರದು ಎಂಬ ನಿಟ್ಟಿನಲ್ಲಿ ಈ ಚಿತ್ರ ಮಾಡುತ್ತಿದ್ದೇವೆ. ಈ ಶೀರ್ಷಿಕೆ ಮತ್ತು ಟ್ಯಾಗ್‍ಲೈನ್‍ ಎರಡೂ ಕೊಟ್ಟಿದ್ದು ನಾನೇ. ಇಂದಿನ ಯುಗದಲ್ಲಿ ನಾವು ಸಾಕಷ್ಟು ಗೊಂದಲಗಳ ಮಧ್ಯೆ ಹೋರಾಟ ಮಾಡುತ್ತಿರುತ್ತೇವೆ ಮತ್ತು ‘ಟಾಕ್ಸಿಕ್’ ಎಂಬ ಪದಕ್ಕೆ ಹಲವು ಅರ್ಥಗಳಿವೆ. ಇಂದು ನಾವು ಇದೇ ಟಾಕ್ಸಿಕ್‍ (ವಿಷಕಾರಿ) ವಾತಾವರಣದಲ್ಲಿ ಬದುಕುತ್ತಿರುವುದರಿಂಧ, ಚಿತ್ರಕ್ಕೆ ಅದೇ ಶೀರ್ಷಿಕೆ ಸೂಕ್ತ ಎಂದನಿಸಿತು’ ಎಂದಿದ್ದಾರೆ.

ಯಶ್‍ ಇದುವರೆಗೂ ಮಾಡಿಕೊಂಡ ಚಿತ್ರಗಳು ಬೇರೆ, ನಿರ್ದೇಶಕಿ ಗೀತು ಮೋಹನ್‍ ದಾಸ್‍ ಪ್ರಪಂಚ ಬೇರೆ. ಎರಡು ಪ್ರಪಂಚಗಳು ಒಟ್ಟಿಗೆ ಸೇರಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಯಶ್‍, ‘ಗೀತು ಅವರ ಚಿತ್ರಗಳು ಬೇರೆ ಇರಬಹುದು. ಆದರೆ, ಅವರಿಗೆ ಮಾಸ್ ಪ್ರೇಕ್ಷಕರ ನಾಡಿಮಿಡಿತ ಬಹಳ ಚೆನ್ನಾಗಿ ಗೊತ್ತಿದೆ. ಇನ್ನು, ನಾನು ಯಾವಾಗಲೂ ಪ್ರೇಕ್ಷಕರನ್ನು ಮನರಂಜಿಸಬೇಕು ಎಂದು ಆಸೆಪಡುವವನು. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಹೇಗೆ ಸಾಧ್ಯ ಎಂದು ಎಷ್ಟೋ ಜನ ಕೇಳಿದ್ದಾರೆ. ಆದರೆ, ಒಂದೊಳ್ಳೆಯ ಮಾಸ್‍ ಕಥೆಯೊಂದಿಗೆ ಗೀತು ಬಂದಿದ್ದರು. ಇದೊಂದು ಮೆಗಾ ಮನರಂಜನಾತ್ಮಕ ಚಿತ್ರವಾಗುತ್ತದೆ ಎಂಬ ಕಾರಣಕ್ಕೆ ನಾನು ಅವರ ಜೊತೆಗೆ ಕೈ ಜೋಡಿಸಿದೆ’ ಎಂದು ಹೇಳಿದ್ದಾರೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ.

ಭೂಮಿಕಾ

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago