ಬೆಂಗಳೂರು: ನಟ ಶಿವರಾಜ್ ಕುಮಾರ್-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.25ಕ್ಕೆ ತೆರೆಗೆ ಬರಲಿದೆ.
ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ಚಿತ್ರದ ಟ್ರೇಲರ್ ಸಿನಿಮಾ ಪ್ರಿಯರ ಗಮನ ಸೆಳೆದಿದ್ದು, ಸೂರಜ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ. ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಕೌಸ್ತುಭ ಮಣಿ ಮತ್ತು ಜಿಶು ಸೇನ್ಗುಪ್ಪಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವು ಡಿಸೆಂಬರ್.25ರಂದು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ.





