just married
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್, ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿವೆ.
abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಈ ಚಿತ್ರವನ್ನು ನಿರ್ಮಿಸಿದ್ದು, ಸಿ.ಆರ್.ಬಾಬಿ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಜೊತೆಗೆ ಶ‍್ರುತಿ, ಮಾಳವಿಕಾ ಅವಿನಾಶ್, ಶ್ರೀಮಾನ್, ವಾಣಿ ಹರಿಕೃಷ್ಣ, ಅಭಿನವ್, ವೇದಿಕಾ, ದೇವರಾಜ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಶೈನ್ ಶೆಟ್ಟಿ, ‘ಆಗಷ್ಟೇ ‘ಕಾಂತಾರ’ ಚಿತ್ರ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ಅವರಿಂದ ನನಗೊಂದು ಕರೆ ಬಂತು. ನಾನೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದರು. ಆನಂತರ ಸಿ.ಆರ್.ಬಾಬಿ ಹಾಗೂ ಅಜನೀಶ್ ಅವರು ಈ ಚಿತ್ರದ ಕಥೆ ಹೇಳಿದರು. ನನಗಂತೂ ಕಥೆ ಬಹಳ ಇಷ್ಟವಾಯ್ತು. ಈ ಚಿತ್ರದಲ್ಲಿ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಇಂತಹ ಹಿರಿಯರೊಡನೆ ನಟಿಸಿದ್ದು ಬಹಳ ಖುಷಿಯಾಗಿದೆ’ ಎಂದರು ನಾಯಕ ಶೈನ್ ಶೆಟ್ಟಿ.
ಚಿಕ್ಕಂದಿನಿಂದಲೂ ತನಗೆ ನಟನೆಯಲ್ಲಿ ಆಸಕ್ತಿ ಎಂದ ಅಂಕಿತಾ, ‘ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ ಎಂಬ ಪ್ರಶ್ನೆ ಮೂಡುತ್ತಿತ್ತು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಅನುಭವಿ ಕಲಾವಿದರ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು. ಈ ಅವಕಾಶಕ್ಕಾಗಿ ಥ್ಯಾಂಕ್ಸ್’ ಎಂದರು.
ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸಂತೆ. ಅದು ‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ‘ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಸಮಯಕ್ಕೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.
‘ಜಸ್ಟ್ ಮ್ಯಾರೀಡ್’ ನೋಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…