ಮನರಂಜನೆ

‘ಜಸ್ಟ್ ಮ್ಯಾರೀಡ್’ ತಂಡದಿಂದ ಟ್ರೇಲರ್ ಬಂತು; ಆ.22ರಂದು ಚಿತ್ರ ತೆರೆಗೆ

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್, ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿವೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಈ ಚಿತ್ರವನ್ನು ನಿರ್ಮಿಸಿದ್ದು, ಸಿ.ಆರ್.ಬಾಬಿ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಶೈನ್‍ ಶೆಟ್ಟಿ ಮತ್ತು ಅಂಕಿತಾ ಅಮರ್ ಜೊತೆಗೆ ಶ‍್ರುತಿ, ಮಾಳವಿಕಾ ಅವಿನಾಶ್‍, ಶ್ರೀಮಾನ್, ವಾಣಿ ಹರಿಕೃಷ್ಣ, ಅಭಿನವ್, ವೇದಿಕಾ, ದೇವರಾಜ್‍, ಅಚ್ಯುತ್‍ ಕುಮಾರ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶೈನ್‍ ಶೆಟ್ಟಿ, ‘ಆಗಷ್ಟೇ ‘ಕಾಂತಾರ’ ಚಿತ್ರ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ಅವರಿಂದ ನನಗೊಂದು ಕರೆ ಬಂತು. ನಾನೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದರು. ಆನಂತರ ಸಿ‌.ಆರ್.ಬಾಬಿ ಹಾಗೂ ಅಜನೀಶ್ ಅವರು ಈ ಚಿತ್ರದ ಕಥೆ ಹೇಳಿದರು. ನನಗಂತೂ ಕಥೆ ಬಹಳ ಇಷ್ಟವಾಯ್ತು. ಈ ಚಿತ್ರದಲ್ಲಿ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಇಂತಹ ಹಿರಿಯರೊಡನೆ ನಟಿಸಿದ್ದು ಬಹಳ ಖುಷಿಯಾಗಿದೆ’ ಎಂದರು ನಾಯಕ ಶೈನ್ ಶೆಟ್ಟಿ.

ಚಿಕ್ಕಂದಿನಿಂದಲೂ ತನಗೆ ನಟನೆಯಲ್ಲಿ ಆಸಕ್ತಿ ಎಂದ ಅಂಕಿತಾ, ‘ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ ಎಂಬ ಪ್ರಶ್ನೆ ಮೂಡುತ್ತಿತ್ತು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಅನುಭವಿ ಕಲಾವಿದರ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು‌. ಈ ಅವಕಾಶಕ್ಕಾಗಿ ಥ್ಯಾಂಕ್ಸ್’ ಎಂದರು.

ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸಂತೆ. ಅದು ‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ‘ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಸಮಯಕ್ಕೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ‌ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.

‘ಜಸ್ಟ್ ಮ್ಯಾರೀಡ್‍’ ನೋಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

2 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

2 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

2 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

2 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

2 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

5 hours ago