ಮನರಂಜನೆ

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್‌ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಈ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್‌ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ, ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

ಸುಜಿತ್ ನಂಬಿಯಾರ್ಚಿ ಕಥೆ ಬರೆದಿದ್ದಾರೆ. ಅವರ ಜೊತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

6 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

7 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago