ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.
ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಈ ಚಿತ್ರಕ್ಕಿದೆ.
ದಿಬು ನೈನನ್ ಥಾಮಸ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ, ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.
ಸುಜಿತ್ ನಂಬಿಯಾರ್ಚಿ ಕಥೆ ಬರೆದಿದ್ದಾರೆ. ಅವರ ಜೊತೆಗೆ ದೀಪು ಪ್ರದೀಪ್ ಸಾಥ್ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…