ಮನರಂಜನೆ

ಅಕ್ಟೋಬರ್‍ನಲ್ಲಿ ‘ಯು/ಐ’ ಬಿಡುಗಡೆ; ಟೀಸರ್‍ನಲ್ಲಿ ದಿನಾಂಕ ಘೋಷಣೆ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಈ ವರ್ಷ ಬಿಡುಗಡೆಯಾಗುವುದೇ ಸಂಶಯ ಎಂಬಂತಹ ಮಾತುಗಳಿದ್ದವು. ಏಕೆಂದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರತಂಡ ಇನ್ನೂ ಬಿಡುಗಡೆ ದಿನಾಂಕವನ್ನೇ ಘೋಷಿಸಿರಲಿಲ್ಲ. ಈಗ ಚಿತ್ರವನ್ನು ಅಕ್ಟೋಬರ್‍ನಲ್ಲಿ ಬಿಡುಗಡೆ ಮಾಡುವುದಾಗಿ ಉಪೇಂದ್ರ ಘೋಷಿಸಿದ್ದಾರೆ.

‘ಯು/ಎ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಇತ್ತು. ಆದರೆ, ಹುಟ್ಟುಹಬ್ಬಕ್ಕೆ ಇನ್ನೊಂದು ತಿಂಗಳವೂ ಇಲ್ಲ. ಹೀಗಿರುವಾಗ ಸೆ. 18ರ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ ಎಂಬ ಖಾತ್ರಿ ಇತ್ತು. ಹಾಗಾದರೆ, ಬೇರೆ ಯಾವಾಗ ಎಂಬ ಪ್ರಶ್ನೆಯೂ ಇತ್ತು. ಮುಂದಿನ ದಿನಗಳಲ್ಲಿ ‘ಮಾರ್ಟಿನ್‍’, ‘ಭೈರತಿ ರಣಗಲ್‍’, ‘ಕೆಡಿ – ದಿ ಡೆವಿಲ್‍’ ಮುಂತಾದ ಚಿತ್ರಗಳು ಬಿಡುಗಡೆಗೆ ಇರುವುದರಿಂದ, ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಬಹುದು ಎಂಬ ಮಾತು ಸಹ ಕೇಳಿ ಬಂದಿತ್ತು.

ಆದರೆ, ಅಷ್ಟು ದಿನ ಕಾಯಬೇಕಿಲ್ಲ, ಚಿತ್ರವನ್ನು ಅಕ್ಟೋಬರ್‍ನಲ್ಲೇ ತೋರಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಈ ಪೋಸ್ಟರ್‍ನಲ್ಲಿ ಚಿತ್ರ ಅಕ್ಟೋಬರ್‍ನಲ್ಲಿ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ. ಆದರೆ, ಬಿಡುಗಡೆಯ ನಿಖರ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ. ಉಪೇಂದ್ರ ಸದ್ಯದಲ್ಲೇ ಒಂದು ಡೈಲಾಗ್‍ ಟೀಸರ್‍ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದು, ಆ ಟೀಸರ್‍ನಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂದು ಅಧಿಕೃತವಾಗಿ ತಿಳಿಸಲಾಗುತ್ತದಂತೆ.

‘ಯು/ಐ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

11 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

11 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

11 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

11 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

12 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

12 hours ago