Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

UI’ ವಿತರಣೆ ಕೆವಿಎನ್‍ ಪ್ರೊಡಕ್ಷನ್ಸ್ ತೆಕ್ಕೆಗೆ…

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಜಗತ್ತಿನಾದ್ಯಂತ ಡಿಸೆಂಬರ್‍.20ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ವಿತರಣಾ ಹಕ್ಕುಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವು ಪ್ರದೇಶಗಳ ಮಾರಾಟ ಈಗಾಗಲೇ ಮುಗಿದಿದೆ. ವಿಶೇಷವೆಂದರೆ, ಕರ್ನಾಟಕದ ವಿತರಣಾ ಹಕ್ಕುಗಳನ್ನು ಖ್ಯಾತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್ ತನ್ನದಾಗಿಸಿಕೊಂಡಿದೆ.

ಕರ್ನಾಟಕದಲ್ಲಿ ಚಿತ್ರದ ವಿತರಣೆ ಹಕ್ಕುಗಳನ್ನು ಕೆ.ವಿ.ಎನ್ ಸಂಸ್ಥೆ ಪಡೆದುಕೊಂಡಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಈಗಾಗಲೇ ದೊಡ್ಡ ಮಟ್ಟಕ್ಕೆ ಹೆಸರಿರುವ ಅಲ್ಲು ಅರವಿಂದ್‍ ಒಡೆತನದ ಗೀತಾ ಆರ್ಟ್ಸ್ ಸಂಸ್ಥೆ ವಿತರಿಸತ್ತಿದೆ. ಕೇರಳದಲ್ಲಿ ಎಪಿ ಇಂಟರ್ನ್ಯಾಷನಲ್ ಪ್ರೊಡಕ್ಷನ್ ಹೌಸ್ ಬಿಡುಗಡೆ ಮಾಡಿದರೆ, ಹೊರದೇಶಗಳಲ್ಲಿ ಹೋಮ್ ಸ್ಕ್ರೀನ್ ಎಂಟರ್ಟೈನ್ಮೆಂಟ್ ವಿತರಣೆ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ.

ಕೆಲವು ತಿಂಗಳುಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ಬಿಡುಗಡೆ ಮಾಡುವುದಕ್ಕೆ ತೆಲುಗಿನ ಜನಪ್ರಿಯ ನಿರ್ಮಾಪಕ ಮತ್ತು ವಿತರಕ ಅಲ್ಲು ಅರವಿಂದ್ ಬಂದಿದ್ದರು. ಚಿತ್ರದ ತೆಲುಗು ಅವತರಣಿಕೆಯನ್ನು ಅವರೇ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆ ಮಾಡಬಹುದು ಎಂಬ ಮಾತು ಆಗ ಕೇಳಿಬಂದಿತ್ತು. ಅದೀಗ ನಿಜವಾಗಿದ್ದು, ಎರಡೂ ರಾಜ್ಯಗಳಲ್ಲಿ ‘ಯುಐ’ ಚಿತ್ರವನ್ನು ಅಲ್ಲು ಅರವಿಂದ್‍ ಬಿಡುಗಡೆ ಮಾಡುತ್ತಿದ್ದಾರೆ.

ಇನ್ನು, ‘UI’ ಚಿತ್ರವು ಡಿಸೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಇನ್ನು ಕೆಲವೇ ದಿನಗಳಿದ್ದರೂ, ಚಿತ್ರದ ಪ್ರಚಾರ ಮಾತ್ರ ಇನ್ನೂ ಪ್ರಾರಂಭವಾಗಿಲ್ಲ. ಕೆಲವು ತಿಂಗಳುಗಳ ಹಿಂದೆಯೇ ಚಿತ್ರದ ಹಾಡು ಮತ್ತು ಟೀಸರ್‍ ಬಿಡುಗಡೆಯಾಗಿತ್ತು. ಆ ನಂತರ ಚಿತ್ರತಂಡದಿಂದ ಚಿತ್ರದ ಕುರಿತು ಏನೂ ಬಿಡುಗಡೆಯಾಗಿಲ್ಲ. ಹಾಗಾಗಿ, ಚಿತ್ರದ ಹಾಡು ಬಿಡುಗಡೆ ಯಾವಾಗ, ಟ್ರೇಲರ್‍ ಬಿಡುಗಡೆ ಯಾವಾಗ? ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

‘UI’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಜೊತೆಯಾಗಿ ನಿರ್ಮಿಸಿದ್ದಾರೆ.

Tags: