ಕನ್ನಡದ ನಿರೀಕ್ಷಿತ ಚಿತ್ರಗಳ ಬಿಡುಗಡೆ ದಿನಾಂಕಗಳೆಲ್ಲ ಒಂದರಹಿಂದೊಂದು ಘೋಷಣೆಯಾಗುತ್ತಿವೆ. ಆದರೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರದ ಸುದ್ದಿಯೇ ಇಲ್ಲ. ಮೊದಲಿಗೆ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ನೋಡಿದರೆ, ಉಪೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಉಪೇಂದ್ರ ಅಭಿನಯದ ‘ಯು/ಐ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಇತ್ತೀಚೆಗೆ ಹಂಗೇರಿಯ ಬುಡಾಪೆಸ್ಟ್ನಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸಗಳು ನಡೆಯುತ್ತಿವೆ. ಮಿಕ್ಕಂತೆ ಚಿತ್ರದಲ್ಲಿ ಗ್ರಾಫಿಕ್ಸ್ ಭಾಗ ಜಾಸ್ತಿ ಇರುವುದರಿಂದ ಚಿತ್ರದ ಕೆಲಸಗಳು ಸ್ವಲ್ಪ ತಡವಾಗುತ್ತಿದೆಯಂತೆ. ಮೂಲಗಳ ಪ್ರಕಾರ, ಈ ತಿಂಗಳ ಕೊನೆಗೆಯ ಹೊತ್ತಿಗೆ ಚಿತ್ರದ ಮೊದಲ ಕಾಪಿ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ. ಅದನ್ನು ನೋಡಿಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸುತ್ತಿದ್ದಂತೆ.
ಸದ್ಯಕ್ಕಂತೂ ಮೂಲಗಳು ಹೇಳುವಂತೆ ‘ಯು/ಐ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆಯಂತೆ. ಉಪೇಂದ್ರ ಅವರ ಹುಟ್ಟುಹಬ್ಬ (ಸೆಪ್ಟೆಂಬರ್ 18) ಈ ವಾರ ಬುಧವಾರ ಬೀಳಲಿದೆ. ಹಾಗಾಗಿ, ಹುಟ್ಟುಹಬ್ಬದ ಸಂದರ್ಭದಲ್ಲಿ 19 ಅಥವಾ 20ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತಿದೆ.
‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್ ಎಂಟರ್‍ಟೈನರ್ಸ್ ಸಂಸ್ಥೆಗಳಡಿ ಜಿ. ಮನೋಹರನ್ ಮತ್ತು ಶ್ರೀಕಾಂತ್ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
‘ಯುಐ’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್, ಅಚ್ಯುತ್ ಕುಮಾರ್, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…