ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್ ಆಗಲಿದೆ.
‘UI’ ಚಿತ್ರದ ಟಿವಿ ಮತ್ತು ಓಟಿಟಿ ಹಕ್ಕುಗಳನ್ನು ಜೀ ಕನ್ನಡ ಕೊಂಡಿದ್ದು, ಈ ಚಿತ್ರವನ್ನು ಯುಗಾದ ಹಬ್ಬದ ಪ್ರಯುಕ್ತ ಭಾನುವಾರ ಸಂಜೆ 4.30ಕ್ಕೆ ಪ್ರಸಾರ ಮಾಡಲಿದೆ. ಟಿವಿಯಲ್ಲಿ ಪ್ರಸಾರದ ಜೊತೆಗೆ ಅಂದೇ, ಅದೇ ಸಮಯಕ್ಕೆ ಜಿ5 ಓಟಿಟಿಯಲ್ಲೂ ಪ್ರಸಾರ ಕಾಣಲಿದೆ.
‘UI’ ಚಿತ್ರವು ಡಿಸೆಂಬರ್ 20ರಂದು ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂಬ ಸುದ್ದಿ ಇತ್ತು. ಒಟ್ಟಾರೆ ಚಿತ್ರದ ಗಳಿಕೆ 30 ಕೋಟಿ ರೂ.ನಷ್ಟಾಗಿದ್ದು, ಚಿತ್ರಕ್ಕೆ ಹಾಕಿದ ಬಂಡವಾಳಕ್ಕೆ ಹೋಲಿಸಿದರೆ, ಗಳಿಕೆ ಕಡಿಮೆಯಷ್ಟೇ ಅಲ್ಲ, ನಿರ್ಮಾಪಕರಿಗೆ ಚಿತ್ರದಿಂದ ಸಾಕಷ್ಟು ನಷ್ಟವಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡದವರು ಮಾತ್ರ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಬಗ್ಗೆ ಖುಷಿಯಾಗಿದ್ದಷ್ಟೇ ಅಲ್ಲ, ಸಂಭ್ರಮದಲ್ಲಿ ಕೇಕು ಕತ್ತರಿಸಿ ಸಂಭ್ರಮಿಸಿದ್ದರು.
ತಾನಂದುಕೊಂಡಂತೆ ಪ್ರೇಕ್ಷಕರು ಚಿತ್ರವನ್ನು ಚೆನ್ನಾಗಿಯೇ ಡೀಕೋಡ್ ಮಾಡಿದ್ದಾರೆ ಎಂದಿದ್ದ ಉಪೇಂದ್ರ, ‘ಈ ಚಿತ್ರದಿಂದ ಏನೇನು ಅರ್ಥವಾಯ್ತು ಎಂಬುದು ಅವರವರಿಗೆ ಬಿಟ್ಟಿದ್ದು. ಅವರವರ ಗ್ರಹಿಕೆಯ ಮೇಲೆ ಚಿತ್ರವು ಬೇರೆ ಬೇರೆ ರೀತಿ ಅರ್ಥವಾಗುತ್ತಾ ಹೋಗುತ್ತದೆ. ಹಾಗೆ ನೋಡಿದರೆ, ಇಲ್ಲಿ ತಲೆಗೆ ಹುಳ ಬಿಡುವಂತದ್ದೇನ್ನೂ ಇಲ್ಲ. ಎಲ್ಲವೂ ನೇರವಾಗಿಯೇ ಇದೆ. ಆದರೆ, ಇಂಥ ಚಿತ್ರಗಳಿಗೆ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂಬ ಸರ್ವಾನುಮತದ ಅಭಿಪ್ರಾಯ ಸಿಗುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಗ್ರಹಿಸುತ್ತಾರೆ ಮತ್ತು ತಾವು ಅರ್ಥ ಮಾಡಿಕೊಂಡಿದ್ದನ್ನು ಹೇಳುತ್ತಾರೆ’ ಎಂದು ಉಪೇಂದ್ರ ಹೇಳಿಕೊಂಡಿದ್ದರು.
‘UI’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ರವಿಶಂಕರ್, ಅಚ್ಯುತ್ ಕುಮಾರ್, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…