Categories: ಮನರಂಜನೆ

ಗಂಡ ಟಾಲಿವುಡ್‍ಗೆ, ಹೆಂಡತಿ ಬಾಲಿವುಡ್‍ಗೆ; ಬೇರೆ ಬೇರೆ ಭಾಷೆಗಳಲ್ಲಿ ಉಪೇಂದ್ರ, ಪ್ರಿಯಾಂಕಾ ಬ್ಯುಸಿ

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಸದ್ಯಕ್ಕೆ ಈ ಚಿತ್ರವನ್ನು ‘ರಾಪೋ 22’ ಎಂದು ಕರೆಯಲಾಗುತ್ತಿದ್ದು, ಚಿತ್ರದ ಹೆಸರು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ. ಈ ಚಿತ್ರದ ಮೊದಲ ಝಲಕ್‍, ಮೇ.15ರಂದು ಬಿಡುಗಡೆಯಾಗುತ್ತಿದೆ.

ರಾಮ್‍ ಪೋತಿನೇನಿ ಅಭಿನಯದ ಈ ಚಿತ್ರವನ್ನು ಮಹೇಶ್‍ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸುತ್ತಿದೆ. ಉಪೇಂದ್ರ ಅವರ ಪೋಸ್ಟರ್‍ ಬಿಡುಗಡೆ ಆಗಿದ್ದು, ಈ ಚಿತ್ರದಲ್ಲಿ ಅವರು ಸೂರ್ಯ ಕುಮಾರ್ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಆ ಕಡೆ ಉಪೇಂದ್ರ ಟಾಲಿವುಡ್‍ಗೆ ಹೊರಟರೆ, ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಸೆಪ್ಟೆಂಬರ್‌ 21’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯಲ್ಲಿ ಪ್ರಿಯಾಂಕಾ ಉಪೇಂದ್ರ, ಕೇರ್‌ ಟೇಕರ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಬಾಲಿವುಡ್‌ನ ಪ್ರವೀಣ್ ಸಿಂಗ್ ಸಿಸೋಡಿಯಾ, ಜರೀನಾ ವಹಾಬ್, ಅಮಿತ್ ಬೆಹ್ಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಮಲಯಾಳಂ ಬರಹಗಾರ ನೆಲ್ಲೂಲಿ ಪಿ. ರಾಜಶೇಖರನ್ ಬರೆದಿದ್ದಾರೆ. ಕನ್ನಡಿಗ ವಿನಯ್ ಚಂದ್ರ ಸಂಗೀತ ಸಂಯೋಜಿಸಿದರೆ, ಅನಿಲ್ ಕುಮಾರ್ ಛಾಯಾಗ್ರಹಣವಿದೆ. ಸದ್ಯ ಶೂಟಿಂಗ್‌ ಹಂತದಲ್ಲಿರುವ ಈ ಸಿನಿಮಾ, ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಗೆ ಸ್ಪರ್ಧಿಸುವುದರ ಜೊತೆಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಬೇರೆ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವಾಗಲೇ, ಅವರ ಮಗ ಆಯುಷ್‍ ಸಹ ಸದ್ಯದಲ್ಲೇ ಹೀರೋ ಆಗಲಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

21 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

21 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

21 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

21 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

21 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

21 hours ago