ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.
MDM ಪ್ರೊಡಕ್ಷನ್ ಲಾಂಛನದಲ್ಲಿ ’ರಕ್ತ ಕಾಶ್ಮೀರ’ ನಿರ್ಮಾಣವಾಗಿದ್ದು, ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ನವೆಂಬರ್ 06ರಂದು ಬಿಡುಗಡೆ ಮಾಡುವುದಕ್ಕೆ ಬಾಬು ಮುಂದಾಗಿದ್ದು, ಸದ್ಯದಲ್ಲೇ ಈ ಕುರಿತು ಅಧಿಕೃತ ಘೋಷಣೆ ಆಗಲಿದೆ.
2007ರಲ್ಲಿ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಉಪೇಂದ್ರ ಮತ್ತು ರಮ್ಯಾ ಅಭಿನಯದಲ್ಲಿ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಎಂಬ ಚಿತ್ರ ಪ್ರಾರಂಭವಾಗಿತ್ತು. ಚಿತ್ರೀಕರಣ ಮುಗಿದರೂ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಅದೇ ಚಿತ್ರವು 17 ವರ್ಷಗಳ ನಂತರ ಹೊಸ ಹೆಸರಿನೊಂದಿಗೆ ಮತ್ತು ಒಂದಿಷ್ಟು ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯ ಸುತ್ತ ಈ ಚಿತ್ರ ಸುತ್ತುದಂತೆ.
ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಮತ್ತು ಗುರುಕಿರಣ್ ಸಂಗೀತ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯ, ಪಾರ್ವತಿ ಮಿಲ್ಟನ್, ದೊಡ್ಡಣ್ಣ, ಓಂಪ್ರಕಾಶ್ ರಾವ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇನ್ನು, ಈ ಚಿತ್ರಕ್ಕಾಗಿ ವಿಶೇಷ ಹಾಡೊಂದನ್ನು ಚಿತ್ರೀಕರಣ ಮಾಡಲಾಗಿದ್ದು, ಈ ಹಾಡಿನಲ್ಲಿ ಡಾ. ವಿಷ್ಣುವರ್ಧನ್, ಅಂಬರೀಶ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ರಮೇಶ್ ಅರವಿಂದ್, ದರ್ಶನ್, ಆದಿತ್ಯ ಮುಂತಾದವರು ಕಾಣಿಸಿಕೊಂಡಿರುವುದು ವಿಶೇಷ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…