ಮನರಂಜನೆ

ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್ ‍ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

MDM ಪ್ರೊಡಕ್ಷನ್ ಲಾಂಛನದಲ್ಲಿ ’ರಕ್ತ ಕಾಶ್ಮೀರ’ ನಿರ್ಮಾಣವಾಗಿದ್ದು, ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ನವೆಂಬರ್ 06ರಂದು ಬಿಡುಗಡೆ ಮಾಡುವುದಕ್ಕೆ ಬಾಬು ಮುಂದಾಗಿದ್ದು, ಸದ್ಯದಲ್ಲೇ ಈ ಕುರಿತು ಅಧಿಕೃತ ಘೋಷಣೆ ಆಗಲಿದೆ.

2007ರಲ್ಲಿ ಎಸ್‍.ವಿ. ರಾಜೇಂದ್ರ ಸಿಂಗ್‍ ಬಾಬು ನಿರ್ದೇಶನದಲ್ಲಿ ಉಪೇಂದ್ರ ಮತ್ತು ರಮ್ಯಾ ಅಭಿನಯದಲ್ಲಿ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಎಂಬ ಚಿತ್ರ ಪ್ರಾರಂಭವಾಗಿತ್ತು. ಚಿತ್ರೀಕರಣ ಮುಗಿದರೂ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಅದೇ ಚಿತ್ರವು 17 ವರ್ಷಗಳ ನಂತರ ಹೊಸ ಹೆಸರಿನೊಂದಿಗೆ ಮತ್ತು ಒಂದಿಷ್ಟು ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯ ಸುತ್ತ ಈ ಚಿತ್ರ ಸುತ್ತುದಂತೆ.

ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಮತ್ತು ಗುರುಕಿರಣ್ ಸಂಗೀತ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯ, ಪಾರ್ವತಿ ಮಿಲ್ಟನ್, ದೊಡ್ಡಣ್ಣ, ಓಂಪ್ರಕಾಶ್ ರಾವ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನು, ಈ ಚಿತ್ರಕ್ಕಾಗಿ ವಿಶೇಷ ಹಾಡೊಂದನ್ನು ಚಿತ್ರೀಕರಣ ಮಾಡಲಾಗಿದ್ದು, ಈ ಹಾಡಿನಲ್ಲಿ ಡಾ. ವಿಷ್ಣುವರ್ಧನ್‍, ಅಂಬರೀಶ್‍, ಶಿವರಾಜಕುಮಾರ್, ಪುನೀತ್‍ ರಾಜಕುಮಾರ್, ಜಗ್ಗೇಶ್‍, ರಮೇಶ್‍ ಅರವಿಂದ್‍, ದರ್ಶನ್‍, ಆದಿತ್ಯ ಮುಂತಾದವರು ಕಾಣಿಸಿಕೊಂಡಿರುವುದು ವಿಶೇಷ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago