ಮನರಂಜನೆ

ಐದಾರು ಮದುವೆ ಆಗಬಹುದು ಚಿತ್ರ ನಿರ್ದೇಶನ ಮಾಡೋದು ಕಷ್ಟ: ಉಪೇಂದ್ರ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್‍ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್‍ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ.

ಇಷ್ಟಕ್ಕೂ ಚಿತ್ರ ಯಾಕೆ ಇಷ್ಟೊಂದು ವಿಳಂಬವಾಗುತ್ತಿದೆ? ಎಂಬ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿ ಇದ್ದೇ ಇದೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿರುವ ಉಪೇಂದ್ರ, ‘ಐದಾರು ಮದುವೆ ಆಗಬಹುದು. ಆದರೆ, ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಬಹಳ ವರ್ಷಗಳ ನಂತರ ನಾನು ನಿರ್ದೇಶಿಸಿರುವ ‘UI’ ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ ಕೆಲಸಗಳು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಚಿತ್ರ ಸ್ವಲ್ಪ ತಡವಾಗಿದೆ. ಚಿತ್ರದ ಮೇಕಿಂಗ್‍ ಮುಂಚಿನಂತಿಲ್ಲ. ಸಾಕಷ್ಟು ಬದಲಾಗಿದೆ. ಮುಂಚೆಲ್ಲಾ ಒಂದು ಹಾಡನ್ನು ಮೂರು ದಿನಗಳಲ್ಲಿ ಚಿತ್ರೀಕರಣ ಮಾಡುತ್ತಿದ್ದೆವು. ಈಗ 10 ದಿನಗಳಾದರೂ ಬೇಕು. ಹಾಗಾಗಿ ಸ್ವಲ್ಪ ತಡವಾಗಿದೆ. ಇನ್ನು, ಚಿತ್ರ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ’ ಎಂದರು.

 

ಈ ಚಿತ್ರದಲ್ಲಿ ಜನರ ತಲೆಯಲ್ಲಿರುವ ಹುಳವನ್ನು ತೆಗೆಯುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿರುವ ಅವರು, ‘ಜನ ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಪ್ರತಿಯೊಬ್ಬರೂ ಈಗ ತಂತ್ರಜ್ಞರಾಗಿದ್ದಾರೆ. ಅವರಿಗೆ ತಕ್ಕಂತೆ ಸಿನಿಮಾ ಕೊಡಬೇಕು ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಅಭಿಮಾನಿ ದೇವರು ಯೆಸ್ ಅಂದರೆ ಸಾಕು ಆ ಸಿನಿಮಾ ಸೂಪರ್ ಹಿಟ್’ ಎಂದರು.

ಇನ್ನು, ‘ಯುಐ’ ಚಿತ್ರದಲ್ಲಿ ಉಪೇಂದ್ರ, ಕಲ್ಕಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆಯೂ ಇದೆ. ಈ ಕುರಿತು ಮಾತನಾಡುವ ಅವರು, ‘’ಕಲ್ಕಿ 2898 ಎಡಿ’ ಚಿತ್ರವು ಮೈಥಾಲಜಿಕಲ್‍ (ಪೌರಾಣಿಕ) ಚಿತ್ರವಾಗಿತ್ತು. ಆದರೆ, ಇದು ಲಾಜಿಕಲ್‍ ಮತ್ತು ಸೈಕಲಾಜಿಕಲ್‍ ಚಿತ್ರವಾಗಿರಲಿದೆ’ ಎಂದು ಹೇಳಿದರು.

ಭೂಮಿಕಾ

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago