Mysore
20
scattered clouds

Social Media

ಸೋಮವಾರ, 26 ಜನವರಿ 2026
Light
Dark

ಭಾರ್ಗವನಿಗೆ ಮುಹೂರ್ತ: ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭ

upendras upcoming movie bhargarva

ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ನಿರ್ದೇಶಕ ನಾಗಣ್ಣ, ನಿರ್ಮಾಪಕ ‘ಸೂರಪ್ಪ’ ಬಾಬು ಸೇರಿದಂತೆ ಹಲವರು ಹಾಜರಿದ್ದರು. ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ಸ್ವಲ್ಪ ಸಮಯವಿದೆ. ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಘೋಷಿಸಲಾಗಿತ್ತು. ಇದೀಗ ಚಿತ್ರಕ್ಕೆ ಕೊನೆಗ ಚಾಲನೆ ಸಿಕ್ಕಿದೆ. ಈ ಚಿತ್ರಕ್ಕೆ A Violent Family Man ಎಂಬ ಅಡಿಬರಹವಿದೆ.

ಅಂದಹಾಗೆ, ಈ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಕ್ಕೂ ಮೊದಲು ‘ಗೌರಮ್ಮ’, ‘ಕುಟುಂಬ’, ‘ಗೋಕರ್ಣ’ ಮತ್ತು ‘ದುಬೈ ಬಾಬು’ ಚಿತ್ರಗಳಲ್ಲಿ ಉಪೇಂದ್ರ ಅವರನ್ನು ನಿರ್ದೇಶನ ಮಾಡಿದ್ದರು ಹಿರಿಯ ನಿರ್ದೇಶಕ ನಾಗಣ್ಣ. ಈಗ ಐದನೇ ಬಾರಿಗೆ ನಾಗಣ್ಣ ಅಭಿನಯದ ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸುತ್ತಿರುವುದು ವಿಶೇಷ.

ರಾಂಬಾಬು ಪ್ರೊಡಕ್ಷನ್ಸ್ ಬ್ಯಾನರ್rte ಅಡಿ ‘ಭಾರ್ಗವ’ ಚಿತ್ರವನ್ನು ‘ಸೂರಪ್ಪ’ ಬಾಬು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ‍ಜನ್ಯ ಸಂಗೀತ, ರಾಜರತ್ನಂ ಅವರ ಛಾಯಾಗ್ರಹಣವಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳು ಇನ್ನಷ್ಟೇ ಘೋಷಣೆಯಾಗಬೇಕಿವೆ.

Tags:
error: Content is protected !!