ಮನರಂಜನೆ

ಗಂಡ-ಹೆಂಡತಿ ಮತ್ತು ಅವನು ; ‘ಉಸಿರು’ ಚಿತ್ರದ ಟೀಸರ್‌ ಬಿಡುಗಡೆ

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ ನಿರ್ಮಿಸಿದರೆ, ಪ್ರಭಾಕರ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶ್ರೀನಗರ ಕಿಟ್ಟಿ ಮತ್ತು ರವಿ ಆರ್‌. ಗರಣಿ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬ ಆತಂಕಕಾರಿ ವ್ಯಕ್ತಿಯಿಂದ ತನ್ನ ಹೆಂಡತಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದು ‘ಉಸಿರು’ ಚಿತ್ರದ ಕಥೆಯಾಗಿದ್ದು, ಈ ಚಿತ್ರಕ್ಕಾಗಿ ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ನಿರ್ದೇಶಕರಾಗಬೇಕೆಂಬುದು ಪ್ರಭಾಕರ್‌ ಅವರ 12 ವರ್ಷಗಳ ಕನಸಂತೆ. ‘ಈ ಹಿಂದೆ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಇದು ನನ್ನ ನಿರ್ದೇಶನದ ಪ್ರಥಮ ಚಿತ್ರ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಚಿತ್ರದಲ್ಲಿ ಎಲ್ಲಾ ರೀತಿಯ ಎಮೋಶನ್ಸ್ ಇದ್ದು, ಪ್ರತಿ ಪಾತ್ರಕ್ಕೂ ಅದರದೇ ಆದ ಗುರುತು ಇರುತ್ತದೆ, ಯಾವ ಪಾತ್ರವೂ ಹೀಗೆ ಬಂದು ಹೋಗುವುದಲ್ಲ. ಚಿತ್ರಕ್ಕೆ ‘07.08.09’ ಎಂಬ ಅಡಿಬರಹವಿದೆ. ಇಡೀ ಚಿತ್ರ ಈ ವಿಷಯದ ಮೇಲೆ ಸುತ್ತುತ್ತದೆ. ಈ ಚಿತ್ರದಲ್ಲಿ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ’ ಎಂದು ಹೇಳಿದರು.

ಈ ತರಹದ ಪರಿಕಲ್ಪನೆ ತಾನೆಲ್ಲೂ ಕೇಳಿರಲಿಲ್ಲ ಎನ್ನುವ ತಿಲಕ್‍, ‘07.08.09 ಎನ್ನುವ ಕೋಡ್ ವರ್ಡ್ ಚಿತ್ರದಲ್ಲಿ ತುಂಬಾ ಪ್ರಮುಖ ಪಾತ್ರವಹಿಸುತ್ತದೆ. ಈ ಚಿತ್ರ ಪ್ರೇಕ್‍ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರೆ, ‘ನನ್ನ ಪಾತ್ರಕ್ಕೆ ಹಲವಾರು ಆಯಾಮಗಳಿವೆ ಇದೆ. ನನ್ನ ಪಾತ್ರದಿಂದ ಚಿತ್ರಕಥೆಗೆ ದೊಡ್ಡ ತಿರುವು ಸಿಗುತ್ತದೆ’ ಎಂದು ನಾಯಕಿ ಪ್ರಿಯಾ ಹೆಗ್ಡೆ.

ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡಿ, ‘ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂಬ ಅಂಶವನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಈ ಕಥೆ ಬಹಳ ಇಷ್ಟವಾಗಿ ಚಿತ್ರ ಪ್ರಾರಂಭಿಸಿದೆವು. ಚಿತ್ರದ ಡಿಐ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ’ ಎಂದರು.

‘ಉಸಿರು’ ಚಿತ್ರಕ್ಕೆ ಗಣೇಶ್‍ ನಾರಾಯಣನ್‍ ಸಂಗೀತ ಸಂಯೋಜಿಸಿದರೆ, ಭೈರವರಾಮ ಸಂಭಾಷಣೆ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

3 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

3 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

3 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

3 hours ago