ಮನರಂಜನೆ

‘ಮಹಾನ್’ ಚಿತ್ರದಲ್ಲಿ ವರ್ಷ ಬೊಳ್ಳಮ್ಮ; ಕನ್ನಡದಲ್ಲಿ ಮೊದಲ ಚಿತ್ರ

ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಪಿ.ಸಿ. ಶೇಖರ್ ನಿರ್ದೇಶನದ, ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ’ಮಹಾನ್’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿ ವರ್ಷ ಬೊಳ್ಳಮ್ಮ, ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.ತಮಿಳಿನ ‘ಬಿಗಿಲ್’, ‘96’ ಸೇರಿದಂತೆ ಹಲವು ಚಿತ್ರಗಳಲ್ಲಿ ವರ್ಷ ನಟಿಸಿದ್ದಾರೆ.

ಈ ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಮಾತನಾಡಿರುವ ವರ್ಷ, ‘ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ ‘ಮಹಾನ್’ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ‘ಮಾಹಾನ್’ ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಕಥೆ ಕೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

‘ಮಹಾನ್‍’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

5 mins ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

16 mins ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

19 mins ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

22 mins ago

ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…

41 mins ago

ಹೈಕಮಾಂಡ್‌ ನನ್ನ ಪರವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ…

1 hour ago